Advertisement

ಪರಿಶಿಷ್ಟರಿಗೆ ಪ್ರಗತಿ ಕಾಲೋನಿ: ಪ್ರಿಯಾಂಕ್‌

10:54 AM Jul 07, 2018 | |

ವಾಡಿ: ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿ
ಮತ್ತು ತಾಂಡಾಗಳಿಗೆ ತಲಾ ಕನಿಷ್ಠ ಒಂದು ಕೋಟಿ ರೂ. ಹಾಗೂ ಗರಿಷ್ಠ 5 ಕೋಟಿ ರೂ. ವರೆಗೆ ಅನುದಾನ ಒದಗಿ
ಸುವ ಮೂಲಕ “ಪ್ರಗತಿ ಕಾಲೋನಿ’ ಎನ್ನುವ ಹೊಸ ಯೋಜನೆಯಡಿ ಹಂತ-ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಚಿತ್ತಾಪುರ ಮೀಸಲು ಮತಕ್ಷೇತ್ರದ ಶಾಸಕ, ಸಮಾಜ ಕಲ್ಯಾಣ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಫೇಸ್‌ಬುಕ್‌ನಲ್ಲಿ ಹೇಳಿಕೊಂಡಿದ್ದಾರೆ.

Advertisement

ಗುರುವಾರ ರಾಜ್ಯ ಸರಕಾರ ಮಂಡಿಸಿರುವ ಬಜೆಟ್‌ನಲ್ಲಿ ಕಲಬುರಗಿ ಜಿಲ್ಲೆಗೆ ಏನು ಲಾಭವಾಗಿದೆ ಎನ್ನುವ
ಮುಖ್ಯಾಂಶಗಳನ್ನು ಪ್ರಕಟಿಸಿರುವ ಅವರು, ಜಿಲ್ಲೆಯ ಜನತೆಗೆ ತಮ್ಮ ಇಲಾಖೆಯಿಂದ ಹಾಗೂ ಸರಕಾರದಿಂದ ಲಭ್ಯವಾಗಲಿರುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ್ದಾರೆ. 

ಗಂಗಾ ಕಲ್ಯಾಣ ಯೋಜನೆಯಡಿ ಪಜಾ/ಪಪಂ ಅರ್ಹ ಫಲಾನುಭವಿಗಳಿಗೆ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಸದ್ಯ ಜಾರಿಯಲ್ಲಿರುವ ಸಹಾಯ ಧನದ ಮೊತ್ತವನ್ನು 2.50 ಲಕ್ಷ ರೂ.ಗಳಿಂದ 3 ಲಕ್ಷಕ್ಕೆ ಹಾಗೂ 3.50 ಲಕ್ಷ ರೂ. ಗಳಿಂದ 4 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು.

ಸಾಮಾಜಿಕ ಉದ್ಯಮಶೀಲತಾ ಯೋಜನೆಯಡಿ ಪಜಾ/ಪಪಂ 5000 ಯುವಕ ಯುವತಿಯರಿಗೆ ಸರಕಾರಿ ಮತ್ತು ಖಾಸಗಿ ಬ್ರಾಂಡೆಡ್‌ ಸಂಸ್ಥೆಗಳ ಸಹಯೋಗದೊಂದಿಗೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಗರಿಷ್ಠ 10 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು.

371(ಜೆ)ನೇ ಕಲಂ ವ್ಯಾಪ್ತಿಗೆ ಬರುವ ಕಲಬುರಗಿ ನಗರದಲ್ಲಿ ಖಾಸಗಿ ತರಬೇತಿ ಕೇಂದ್ರಗಳ ಸಹಯೋಗದೊಂದಿಗೆ
ಪಜಾ/ಪಪಂ ಪದವಿಧರರಿಗೆ ಯುಪಿಎಸ್‌ಸಿ, ಕೆಪಿಎಸ್‌ಸಿ ಹಾಗೂ ಬ್ಯಾಂಕಿಂಗ್‌ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ನೀಡಲು ನೆರವು ನೀಡಲಾಗುವುದು. ಪಜಾ/ಪಪಂ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಕ್ರೀಡೆಗಳಲ್ಲಿ ಹೆಚ್ಚಿನ ಪ್ರಾವಿಣ್ಯತೆ ಪಡೆಯಲು ಪ್ರತಿಷ್ಠಿತ ಕ್ರೀಡಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ನೀಡಲಾಗುವುದು. ಇದಕ್ಕಾಗಿ 2 ಕೋಟಿ ರೂ. ವೆಚ್ಚ ಮಾಡಲಾಗುವುದು.

Advertisement

ಕಲಬುರಗಿ ಜಿಲ್ಲೆಯನ್ನು ಭಾರತದ ಸೋಲಾರ್‌ ಜಿಲ್ಲೆಯನ್ನಾಗಿ ಅಭಿವೃದ್ಧಿಪಡಿಸುವ ಮಹತ್ವದ ನಿರ್ಧಾರವನ್ನು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಸೌರವಿದ್ಯುತ್‌ ಉತ್ಪಾದಿಸಲು ಅಗತ್ಯವಿರುವ ಸೋಲಾರ್‌ ಪ್ಯಾನಲ್‌, ಇನ್ವರ್ಟರ್‌ ಗಳು, ಕೆಪ್ಯಾಸೀಟರ್‌ಗಳು ಮತ್ತು ಲುಮಿನೇಟರ್‌ಗಳನ್ನು ಜಿಲ್ಲೆಯಲ್ಲಿಯೇ ಉತ್ಪಾದಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next