ಚಾಮರಾಜನಗರ: ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ಅಭಿವೃದ್ಧಿಯಾದರೆ ಅದು ಪ್ರಗತಿಯ ಸಂಕೇತವಾಗಿದ್ದು, ನಾಗರಿಕರ ಸಂಚಾರಕ್ಕೆ ಅಗತ್ಯವಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ತಾಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಎಸ್ಇಪಿ ಯೋಜನೆಯಡಿ ಪರಿಶಿಷ್ಟ ಜಾತಿಯ ಹೊಸ ಬಡಾವಣೆಯಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ: ಸಿದ್ದಯ್ಯನಪುರ ಗ್ರಾಮಕ್ಕೆ ಅಗತ್ಯವಾಗಿ ಬೇಕಾದ ರಸ್ತೆ, ಚರಂಡಿ, ಸಮುದಾಯ ಭವನ, ಕುಡಿಯುವ ನೀರು, ಗಂಗಾ ಕಲ್ಯಾಣ, ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ, ನಿವೇಶನ, ಸೇರಿದಂತೆ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳನ್ನು ಸಮಗ್ರವಾಗಿ ಕಲ್ಪಿಸಿದ್ದು, ಇಂದು ಪರಿಶಿಷ್ಟ ಜಾತಿಯ ಹೊಸ ಬಡಾವಣೆಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದು ಅಗತ್ಯವಿರುವೆಡೆ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದರು.
ಅಗತ್ಯವಿರುವೆಡೆ ಅಭಿವೃದ್ಧಿ: ಕಾಮಗಾರಿ ನಿರ್ವಹಿಸುತ್ತಿರುವ ಎಂಜಿನಿಯರ್ ಗುತ್ತಿಗೆದಾರರು ಗುಣಮಟ್ಟದಿಂದ ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು. ಸಿದ್ದಯ್ಯನಪುರ ಭಾಗದಲ್ಲಿ ನನೆಗುದಿಗೆ ಬಿದ್ದಿದ್ದ ಸೇತುವೆ ಸಂಪರ್ಕಗಳಿಲ್ಲದೆ ಜನರು ಒಂದು ಕಡೆಯಿಂದ ಮತ್ತೂಂದು ಕಡೆಗೆ ಸಂಚರಿಸಲು ಕಷ್ಟಕರವಾಗಿತ್ತು. ಇಲ್ಲಿನ ಜನರ ಬೇಡಿಕೆಯಂತೆ ಈಗಾಗಲೇ 7 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಸಿದ್ದಯ್ಯನಪುರ ಗ್ರಾಮದಿಂದ ಅಟ್ಟುಗುಳಿಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ
ಸೇತುವೆ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿ ಬಹುತೇಕ ಮುಗಿದಿದ್ದು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್ಇಪಿ, ಟಿಎಸ್ಪಿ ಯೋಜನೆಯಡಿ ಪ.ಜಾತಿ ಹಾಗೂ ಪ.ಪಂಗಡದವರು ವಾಸಿಸುವ ಬಡಾವಣೆ ಗಳಲ್ಲಿ ರಸ್ತೆ, ಚರಂಡಿಗಳನ್ನು ಅಭಿವೃದ್ಧಿಪಡಿಸಲಾಗಿದ್ದು ಅಗತ್ಯವಿರುವೆಡೆ ಅಭಿವೃದ್ಧಿ ಪಡಿಸಲಾಗುವುದೆಂದು ತಿಳಿಸಿದರು.
Related Articles
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಶೈಲಜಾ ಗೋವಿಂದರಾಜು, ಗ್ರಾಪಂ ಸದಸ್ಯ ಬಸವಣ್ಣ ಮಹದೇವಮ್ಮ ಸಿದ್ದರಾಜು, ಯಜಮಾನ ರಾದ ನಂಜುಂಡಯ್ಯ, ದೂಡ್ಡಮಹದೇವಯ್ಯ ಪಾಪು, ಹೊಂಗಲವಾಡಿ ಗ್ರಾಪಂ ಮಾಜಿ ಅಧ್ಯಕ್ಷ ಶಿವಮಾದಯ್ಯ, ಮಾಜಿ ಸದಸ್ಯ ಎಂ.ನಂಜುಂಡ ಸ್ವಾಮಿ, ಮುಖಂಡರಾದ ಹನುಮಂತು, ಶ್ರೀಕಂಠ ಮೂರ್ತಿ, ಬೇಕರಿ ಕುಮಾರ್, ಗೋವಿಂದರಾಜು, ರಾಚಯ್ಯ, ಅಂಕಯ್ಯ ಪ್ರಕಾಶ್, ಕಾವೇರಿ ನೀರಾವರಿ ನಿಗಮದ ಎಂಜಿನಿಯರ್ ಮಹದೇವ ಸ್ವಾಮಿ, ರತೀಶ್ ಸೇರಿದಂತೆ ಗ್ರಾಮಸ್ಥರು ಇದ್ದರು.