Advertisement

ತಂಬಾಕು ನಿಷೇಧ ನಾಮಫಲಕ ಕಡ್ಡಾಯ

04:53 PM Dec 01, 2020 | Suhan S |

ಚಿತ್ರದುರ್ಗ: ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ತಂಬಾಕು ನಿಷೇಧ ಕುರಿತು ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿಯ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ತಂಬಾಕು ನಿಷೇಧದ ಕುರಿತು ನಾಮಫಲಕ ಹಾಕಬೇಕು. ಪ್ರೇಕ್ಷಣೀಯ ಸ್ಥಳಗಳಾದ ಐತಿಹಾಸಿಕ ಕೋಟೆ, ಜೋಗಿಮಟ್ಟಿ, ಹೆಚ್ಚು ಜನಸಂದಣಿ ಇರುವ ತರಕಾರಿ ಮಾರುಕಟ್ಟೆ, ಬಸ್‌ ನಿಲ್ದಾಣ, ಎಪಿಎಂಸಿ ಯಾರ್ಡ್ ಗಳಲ್ಲಿ ತಂಬಾಕು ನಿಷೇಧದ ಕುರಿತು ಗೋಡೆಬರಹ ಹಾಕಬೇಕು. ತಂಬಾಕಿನಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕೆಂದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜಂಟಿ ಖಾತೆಯಲ್ಲಿ ಸಂಗ್ರಹಿಸಿದ ಒಟ್ಟು 2,83,849 ರೂ. ಮೊತ್ತದಲ್ಲಿ ಸೆಕ್ಷನ್‌-4ರ ನಾಮಫಲಕಗಳನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮತ್ತು ಆಸ್ಪತ್ರೆಗಳಲ್ಲಿ ಗೋಡೆ ಬರಹ ಮತ್ತು ಜಾಗೃತಿ ಮೂಡಿಸಲು ಸಭೆ ಅನುಮೋದನೆ ನೀಡಿತು.

ರಾಜ್ಯ ತಂಬಾಕು ನಿಯಂತ್ರಣಕೋಶದ ವಿಭಾಗೀಯ ಸಂಯೋಜಕ ಮಹಂತೇಶ್‌ ಮಾತನಾಡಿ, ಕೋಟ್ಪಾ 2003ರ ಕಾಯ್ದೆಯಲ್ಲಿ ಒಟ್ಟು 33 ಸೆಕ್ಷನ್‌ಗಳಿವೆ. ಇದರಲ್ಲಿ ಸೆಕ್ಷನ್‌ 4, ಸೆಕ್ಷನ್‌ 5, ಸೆಕ್ಷನ್‌ 6, ಸೆಕ್ಷನ್‌ 6ಬಿ, ಸೆಕ್ಷನ್‌ 7 ಹೆಚ್ಚು ಬಳಕೆಯಲ್ಲಿವೆ. ಸೆಕ್ಷನ್‌-6ಬಿ ಪ್ರಕಾರ ಶಿಕ್ಷಣ ಸಂಸ್ಥೆಗಳ 100 ಗಜದ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿûಾರ್ಹ ಅಪರಾಧವಾಗಿದೆ. ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ತಮ್ಮ ಶಿಕ್ಷಣ ಸಂಸ್ಥೆಯನ್ನು ಸಂಪೂರ್ಣವಾಗಿ ತಂಬಾಕು ಮುಕ್ತವನ್ನಾಗಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಜಿಲ್ಲೆಯಲ್ಲಿರುವ ಶಿಕ್ಷಣ ಸಂಸ್ಥೆಗಳ ಮಾಹಿತಿಯನ್ನು ಪಡೆದು ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳನ್ನು ತಂಬಾಕು ಮುಕ್ತ ಶೆ„ಕ್ಷಣಿಕ ಸಂಸ್ಥೆಯನ್ನಾಗಿ ಘೋಷಿಸಲಾಗುವುದು. ಇದಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ತುಳಸಿರಂಗನಾಥ್‌ ಮಾತನಾಡಿದರು. ಸಭೆಯಲ್ಲಿ ಎಎಸ್‌ಪಿ ಎಂ.ಬಿ. ನಂದಗಾವಿ, ಜಿಲ್ಲಾ ಸಲಹೆಗಾರ ಪ್ರಭುದೇವ್‌, ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಭಾಗವಹಿಸಿದ್ದರು.

ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ :  ಕೋಟ್ಪಾ-2003ರ ಕಾಯ್ದೆಯ ಅಡಿಯಲ್ಲಿ ಸೆಕ್ಷನ್‌-5ರ ಅಡಿಯಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ಮತ್ತು ಸೆಕ್ಷನ್‌-7 ಅಡಿಯಲ್ಲಿ ನಿರ್ದಿಷ್ಟ ಪಡಿಸಿದ ಎಚ್ಚರಿಕೆಯ ಸಂದೇಶ (85%) ಇಲ್ಲದಿರುವ ಉತ್ಪನ್ನಗಳು ಹಾಗೂ ಬಿಡಿ-ಬಿಡಿಯಾಗಿ ಮಾರಾಟ ಮಾಡುವ ತಂಬಾಕು ಉತ್ಪನ್ನಗಳ ಮೇಲೆ ಎಫ್‌ಐಆರ್‌ ದಾಖಲಿಸಬೇಕು. ಈ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next