Advertisement

ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಮುಗಿಸಿ: ಡಿಸಿ

05:46 PM Dec 19, 2020 | Suhan S |

ಯಾದಗಿರಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳನ್ನು ನಿಗದಿಪಡಿಸಿದ ಕಾಲಮಿತಿಯೊಳಗೆ ಮುಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯ ಆರ್‌. ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಜಿಲ್ಲಾ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಮಗಾರಿಗಳನ್ನುಸರಿಯಾಗಿ ಪರಿಶೀಲಿಸಿ ಅದನ್ನು ಬಿಟ್ಟುಫಾರ್ಮಾಲಿಟಿಗಾಗಿ ಚೆಕ್‌ ಮಾಡುವ ಕೆಲಸ ಯಾರು ಮಾಡಬಾರದು ಎಂದುಥರ್ಡ್‌ಪಾರ್ಟಿ ಏಜೆನ್ಸಿಗಳ ಪ್ರಮುಖರಿಗೆ ಇದೇ ಸಂದರ್ಭದಲ್ಲಿ ಖಡಕ್‌ ಸೂಚನೆ ನೀಡಿದರು.

ತಮಗೆ ನಿಗದಿಪಡಿಸಿದ ಅವಧಿಯೊಳಗೆ ಥರ್ಡ್‌ ಪಾರ್ಟಿ ಪರಿಶೀಲನೆ ಮುಗಿಸಿ ಸಂಬಂಧಿಸಿದ ಇಲಾಖೆಗಳಿಗೆವರದಿ ನೀಡಬೇಕು ನಿಗದಿಪಡಿಸಿದ ಅವಧಿಯೊಳಗೆ ಮುಗಿಸದಿದ್ದಲ್ಲಿ ಮತ್ತುಹಣವಿಟ್ಟುಕೊಂಡು ಸುಖಾಸುಮ್ಮನೆ ದಿನದೂಡುತ್ತಿದ್ದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದರು. ಈ ವೇಳೆ ಅಪರ ಜಿಲ್ಲಾಧಿಕಾರಿಪ್ರಕಾಶ್‌ ಜಿ.ರಜಪೂತ್‌ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next