Advertisement
ಶುಕ್ರವಾರ ಜಿಲ್ಲಾ ಪಂಚಾಯತ್‌ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿದ ಅವರು, ಜಿಲ್ಲೆಯಲ್ಲಿ ಪಶುಸಂಗೋಪನೆ ಜೊತೆಗೆ ಕೋಳಿ ಸಾಕಾಣಿಕೆಹೆಚ್ಚಾಗಿ ಮಾಡಲಾಗುತ್ತದೆ. ಕೋಳಿಸಾಕಾಣಿಕೆದಾರರೊಂದಿಗೆ ಕಂಪನಿಗಳುಒಪ್ಪಂದ ಮಾಡಿಕೊಂಡಿದ್ದು, ಸಾಕಾಣಿಕೆಗೆಕೋಳಿ ಮರಿಗಳನ್ನು ನೀಡದೆ, ಕಿರುಕುಳನೀಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು,ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
Related Articles
Advertisement
ಬೇಕಾದವರಿಗೆ ಗುತ್ತಿಗೆ: ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಅರುಣ್‌ಪ್ರಸಾದ್ ಮಾತನಾಡಿ, ಬೆಟ್ಟೆಬೆಣೆಜೇನಹಳ್ಳಿ ಶಾಲೆಯು ಕುಸಿಯುವ ಸ್ಥಿತಿಯಲ್ಲಿದೆ.ಹಲವಾರು ಸಭೆಗಳಲ್ಲಿ ಈ ಬಗ್ಗೆ ಮಾಹಿತಿನೀಡಲಾಗಿದ್ದು, ಕ್ಷೇತ್ರ ಶಿಕ್ಷಣಾ ಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರೂ ದುರಸ್ತಿ ಮಾಡಿಸಿಲ್ಲ.ಅಂಬೇಡ್ಕರ್ ಭವನಗಳ ನಿರ್ಮಾಣಕಾಮಗಾರಿಗಳನ್ನು ನಿರ್ಮಿತಿ ಕೇಂದ್ರಕ್ಕೆವಹಿಸಿದ್ದು, ಅವರು ತಮಗೆ ಬೇಕಾದಗುತ್ತಿಗೆದಾರರಿಗೆ ನೀಡುತ್ತಿದ್ದಾರೆ ಆರೋಪಿಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಇರುವ ಯೋಜನೆಗಳು ಹಾಗೂ ಅವುಗಳ ಪ್ರಗತಿ ಅಂಕಿಅಂಶಗಳ ಮಾಹಿತಿಯನ್ನು ಸಭೆಗೆ ನೀಡಿದರು.ಸಭೆಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿಸಮಿತಿ ಅಧ್ಯಕ್ಷ ಚಿನ್ನಸ್ವಾಮಿಗೌಡ, ಜಿಲ್ಲಾಪಂಚಾಯತ್ ಉಪ ಕಾರ್ಯದರ್ಶಿಸಂಜೀವಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬಿಲ್ ಪಾವತಿಸಿದರೂ ಶಾಲೆಗಳಿಗೆ ಪೀಠೊಪಕರಣ ಸರಬರಾಜು ಆಗಿಲ್ಲ : ಶಿಕ್ಷಣ ಇಲಾಖೆಯಿಂದ ಪೀಠೊಪಕರಣಗಳ ಖರೀದಿಗೆ ಟೆಂಡರ್ ಆಗಿದ್ದರೂ ಟೆಂಡರ್‌ದಾರರು ಪೀಠೊಪಕರಣಗಳನ್ನು ಶಾಲೆಗಳಿಗೆ ಸರಬರಾಜು ಮಾಡಿರುವುದಿಲ್ಲ. ಆದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬಿಲ್ ಪಾವತಿ ಮಾಡಿದ್ದು, ಈ ಸಂಬಂಧ ತಪ್ಪಿತಸ್ಥರ ಮೇಲೆ
ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾ ಸಿಇಒ ಎನ್.ಎಂ.ನಾಗರಾಜ್ ಸೂಚಿಸಿದರು. ಇಲಾಖೆಗಳು ತಮ್ಮ ಇಲಾಖೆಯ ಕಾಮಗಾರಿಗಳನ್ನು ಪಿ.ಆರ್.ಇ.ಡಿ ಗೆ ನೀಡಿ ಸುಮ್ಮನಿರುವುದು ಸೂಕ್ತವಲ್ಲ. ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಶಿಷ್ಟಾಚಾರ ಪಾಲನೆ ಮಾಡಿ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಕಟ್ಟಡ ಕಾರ್ಮಿಕರು ಕಾರ್ಮಿಕಇಲಾಖೆಯಲ್ಲಿ ನೋಂದಣಿ ಮಾಡಿಕೊಂಡು ಕಾರ್ಮಿಕ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಗ್ರಾಪಂಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ ಅನುದಾನ ಮೀಸಲಿಡಬೇಕು ಎಂದು ಸಿಇಒ ಎನ್.ಎಂ.ನಾಗರಾಜ್‌ಸೂಚಿಸಿದರು.