Advertisement

60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಿಸಿ

10:46 AM Mar 18, 2021 | Team Udayavani |

ತುಮಕೂರು: ಕೋವಿಡ್ 2ನೇ ಅಲೆ ಹರಡುತ್ತಿರುವಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ನಗರ ಸ್ಥಳೀಯಸಂಸ್ಥೆಗಳ ವ್ಯಾಪ್ತಿಯಲ್ಲಿ 60 ವರ್ಷ ಮೇಲ್ಪಟ್ಟ ನಾಗರಿಕರನ್ನು ಕರೆತಂದು ಕಡ್ಡಾಯವಾಗಿ ಕೋವಿಡ್  ಲಸಿಕೆ ಪಡೆಯುವ ವ್ಯವಸ್ಥೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಬುಧವಾರ ನಡೆದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳತೆರಿಗೆ ವಸೂಲಾತಿ ಹಾಗೂ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿದರು.

ಕೋವಿಡ್ 2ನೇ ಅಲೆ ಹರಡುತ್ತಿದ್ದು, ಜಿಲ್ಲೆಯಲ್ಲಿಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿವ್ಯಾಪ್ತಿಯಲ್ಲಿ ಸಮೀಕ್ಷೆ ಮಾಡಿ, ಇದಕ್ಕಾಗಿ ವಾರ್ಡ್‌ ಸದಸ್ಯರು, ಮಾಜಿ ವಾರ್ಡ್‌ ಸದಸ್ಯರ ಸಹಕಾರ ಪಡೆದು 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಪಡೆಯಲು ವ್ಯವಸ್ಥೆ ಮಾಡಬೇಕು. ಕೋವಿಡ್ಬಗ್ಗೆ ಭಯಪಡದಂತೆ ಕೋವಿಡ್‌ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿ ಹೇಳಬೇಕು ಎಂದರು.

ಕೋವಿಡ್ ಸೋಂಕು ಬಂದಂತಹ ವ್ಯಕ್ತಿಗಳ ಸಂಪರ್ಕದಲ್ಲಿದ್ದವರ ಪತ್ತೆ ಹಚ್ಚಬೇಕು. ಕೋವಿಡ್ ನಿಯಂತ್ರಣ ಮಾಡುವಲ್ಲಿ ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು ಸಹಕಾರನೀಡಬೇಕು. ಅಲ್ಲದೇ ಸಾರ್ವಜನಿಕರು ಮಾಸ್ಕ್ ಧರಿಸುವುದು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವಬಗ್ಗೆ ಧ್ವನಿವರ್ಧಕಗಳಲ್ಲಿ ಪ್ರಚಾರ ಮಾಡಬೇಕು ಎಂದು ಸೂಚಿಸಿದರು.

ಮಹಾನಗರಪಾಲಿಕೆ, ನಗರಸಭೆ, ಪುರಸಭೆ,ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಎಸ್‌ಸಿಪಿ, ಟಿಎಸ್‌ಪಿ ಮತ್ತಿತರರಕಾಮಗಾರಿಗಳನ್ನು ಮಾರ್ಚ್‌ ಮಾಹೆಯೊಳಗೆಪೂರ್ಣಗೊಳಿಸಬೇಕು. ಬಿಡುಗಡೆಯಾಗಿರುವಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡುಶೇ.100ರಷ್ಟು ಪ್ರಗತಿ ಸಾಧಿಸಬೇಕು. ಬೇಸಿಗೆ ಆರಂಭವಾಗುತ್ತಿದ್ದು, ಕುಡಿಯಲು ನೀರಿನಸಮಸ್ಯೆಯಾಗದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

Advertisement

ನಗರ ಪ್ರದೇಶಗಳಲ್ಲಿ ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ಬೇರ್ಪಡಿಸಿ ಮನೆ ಬಾಗಿಲಿಗೆ ಬರುವ ಕಸದವಾಹನಗಳಿಗೆ ನೀಡುವಂತೆ ಧ್ವನಿವರ್ಧಕಗಳ ಮೂಲಕಪ್ರಚಾರ ಮಾಡಬೇಕು. ಪಾಲಿಕೆ, ನಗರಸಭೆ, ಪುರಸಭೆ,ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ, ಟ್ರೇಡ್‌ಲೈಸೆನ್ಸ್‌, ನೀರಿನ ತೆರಿಗೆ, ಮಳಿಗೆಗಳ ಬಾಡಿಗೆ ವಸೂಲಾತಿ ಸಂಗ್ರಹವು ನಿಗಧಿತ ಗುರಿ ತಲುಪಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮನೆಗಳಲ್ಲಿ ಸಂಗ್ರಹವಾಗುವ ಹಸಿ ಕಸದಿಂದಕಾಂಪೊಸ್ಟ್‌ ಕಸ ತಯಾರಿಸುವ ಪೈಪ್‌,ಬ್ಯಾಂಬೂ ಕಾಂಪೊಸ್ಟ್‌ ತಯಾರಿಕೆ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ 7ಸಾವಿರಕ್ಕೂ ಹೆಚ್ಚು ಮನೆಗಳು ಅಳ ವಡಿಸಿಕೊಂಡಿವೆ ಎಂದು ನಗರ ಯೋಜನಾ ನಿರ್ದೇಶಕಿ ಶುಭಾ ಸಭೆಗೆ ತಿಳಿಸಿದರು.

ಪಾಲಿಕೆ ಆಯುಕ್ತೆ ರೇಣುಕಾ, ನಗರಸಭೆ,ಪುರಸಭೆ, ಪಪಂ ಮುಖ್ಯಾಧಿಕಾರಿಗಳು, ಎಂಜಿನಿಯರುಗಳು ಇದ್ದರು.

 

ಜಿಲ್ಲೆಯ ಕೆಲವೆಡೆ ರಸ್ತೆಯ ಬದಿಯಲ್ಲಿ ಕಸ ಹಾಕುತ್ತಿರುವುದು ಕಂಡು ಬಂದಿದ್ದು, ರಸ್ತೆ ಬದಿಗೆ ಕಸ ಹಾಕದಂತೆ ಜಾಗೃತಿ ಮೂಡಿಸಬೇಕು. ಅದಾಗ್ಯೂ ಕಸ ಹಾಕಿದರೆ ದಂಡ ವಿಧಿಸಬೇಕು. ಸಂಪೂರ್ಣವಾಗಿ ಪ್ಲಾಸ್ಟಿಕ್‌ ಬಳಕೆ ನಿಷೇಧಕ್ಕೆ ಎಲ್ಲಾ ಇಲಾಖೆಯ ಅಧಿಕಾರಿಗಳ ಶ್ರಮಿಸಬೇಕು. -ವೈ.ಎಸ್‌.ಪಾಟೀಲ, ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next