Advertisement
ಜಿ.ಪಂ. ಕಚೇರಿಯ ಡಾ| ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Related Articles
Advertisement
ಧಾರ್ಮಿಕ ಪ್ರವಾಸೋದ್ಯಮದ ಜತೆಗೆ ಇತರ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಯೊಂದಿಗೆ ಹೆಚ್ಚು ಪ್ರವಾಸಿಗರು ಆಗಮಿಸುವಂತೆ ಮಾಡಬೇಕು. ಜಿಲ್ಲೆಯಲ್ಲಿ ಹಲವು ಹಿನ್ನೀರಿನ ಪ್ರದೇಶಗಳಿದ್ದು, ಗೋವಾ ಹಾಗೂ ಕೇರಳವನ್ನು ಮೀರಿಸುವಂತೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು ಎಂದರು.
ಪ್ರಗತಿ ಕುಂಠಿತ :
ಕೇಂದ್ರ ಸರಕಾರ ಬೀದಿ ಬದಿಗಳ ವ್ಯಾಪಾರಿಗಳಿಗೆ ಆರ್ಥಿಕ ಸವಲತ್ತುಗಳನ್ನು ನೀಡಲು ಪ್ರಧಾನಮಂತ್ರಿ ಎಸ್‌ವಿಎ ನಿಧಿಯ ಅನುಷ್ಠಾನ ಜಿಲ್ಲೆಯ ಇತರ ತಾಲೂಕುಗಳಿಗೆ ಹೋಲಿಸಿದ್ದಲ್ಲಿ ಉಡುಪಿ ನಗರದಲ್ಲಿ ಕುಂಠಿತವಾಗಿದೆ. ಇದು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಬೇಕು ಎಂದು ಸೂಚನೆ ನೀಡಿದರು.
ಸ್ಯೋದ್ಯೋಗಕ್ಕೆ ಪ್ರೋತ್ಸಾಹ :
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯ ಅನುದಾನದಲ್ಲಿ ಗ್ರಾ.ಪಂ. ಮಟ್ಟದಲ್ಲಿ ಜನರಿಗೆ ದೈನಂದಿನ ಉಪಯೋಗಕ್ಕೆ ಅಗತ್ಯವಿರುವ ವಸ್ತುಗಳ ಮಾರಾಟ ಮಳಿಗೆಗಳನ್ನು ತೆರೆಯಲು ಉತ್ತೇಜಿಸುವುದರೊಂದಿಗೆ ಸ್ವಂತ ಉದ್ಯೋಗ ಕೈಗೊಳ್ಳಲು ಅನುವು ಮಾಡಿಕೊಡಬೇಕು ಎಂದರು.
ಪ್ರಗತಿ ಪರಿಶೀಲನ ಸಭೆಗೆ ಸಮರ್ಪಕ ಮಾಹಿತಿ ಒದಗಿಸದ ಕೆಲವು ಇಲಾಖೆಯ ಕಾರ್ಯವೈಖರಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿ.ಪಂ. ಸಿಇಒ ಡಾ| ನವೀನ್ ಭಟ್ ವೈ., ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಮನೆ ಮನೆಗೆ ನಲ್ಲಿ ನೀರು :
ನಗರ ಪ್ರದೇಶಗಳಿಗೆ ಮೂಲ ಸೌಕರ್ಯಗಳು ಸೇರಿದಂತೆ ಕುಡಿಯುವ ನೀರನ್ನು ಒದಗಿಸುವ ನಗರೋತ್ಥಾನದ ಎರಡನೇ ಹಂತ ಹಾಗೂ ಅಮೃತ್ ಯೋಜನೆಯ ಅನುದಾನವನ್ನು ಸಮರ್ಪಕ ಬಳಕೆ ಮಾಡಿಕೊಳ್ಳುವುದರೊಂದಿಗೆ ಶೀಘ್ರವಾಗಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಜಲ ಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದ ಪ್ರತೀ ಮನೆ ಮನೆಗೆ ಕುಡಿಯುವ ನೀರಿನ ನಳವನ್ನು ಒದಗಿಸಲು ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. 24,270 ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗಿದ್ದು, ಬಾಕಿ ಉಳಿದ 65,700 ಮನೆಗಳಿಗೆ ಶೀಘ್ರದಲ್ಲಿಯೇ ನಲ್ಲಿ ಸಂಪರ್ಕ ಕಲ್ಪಿಸಲು ಡಿಸಿ ಸೂಚಿಸಿದರು.