Advertisement

ಆಲಮಟ್ಟಿ: ಉಪಲೋಕಾಯುಕ್ತರಿಂದ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ

07:46 PM Mar 05, 2022 | Team Udayavani |

ಆಲಮಟ್ಟಿ: ಇಲ್ಲಿನ ಕೆ.ಬಿ.ಜೆ.ಎನ್.ಎಲ್. ಸಭಾಭವನದಲ್ಲಿ ಇಂದು ಗೌರವಾನ್ವಿತ ಉಪಲೋಕಾಯುಕ್ತರಾದ ಶ್ರೀ ಬಿ.ಎಸ್. ಪಾಟೀಲ್ ಅವರ ನೇತೃತ್ವದಲ್ಲಿ ಮುದ್ದೇಬಿಹಾಳ ಹಾಗೂ ನಿಡಗುಂದಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

Advertisement

ಮುದ್ದೇಬಿಹಾಳ, ನಿಡಗುಂದಿ ಹಾಗೂ ಬಸವನ ಬಾಗೇವಾಡಿಯ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗ್ರಾಮ ಪಂಚಾಯತ ಮಟ್ಟದಲ್ಲಿ ಬಯಲು ಶೌಚವನ್ನು ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ಪಡೆದರು.

ಅಧಿಕಾರಿಗಳು ಸೂಕ್ತ ಮಾಹಿತಿಗಳನ್ನು ನೀಡದೇ ಇರುವುದರಿಂದ ಹಾಗೂ ಬಯಲು ಶೌಚ ಮುಕ್ತಗೊಳಿಸಲು ಯಾವುದೇ ಕ್ರಮಗಳನ್ನು ಕೈಗೊಳ್ಳದೇ ಇರುವುದು ಕಂಡು ಬಂದಿದ್ದರಿಂದ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಮುದ್ದೇಬಿಹಾಳ ಪಂಚಾಯತ ರಾಜ ಇಂಜಿನಿಯರಿಂಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ಬಸವನ ಬಾಗೇವಾಡಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಮುದ್ದೇಬಿಹಾಳ ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಪ್ರಧಾನ ಮಂತ್ರಿಗಳ ಗ್ರಾಮ ಸಡಕ್ ಯೋಜನೆ ಮುದ್ದೇಬಿಹಾಳ ಮತ್ತು ಬಸವನ ಬಾಗೇವಾಡಿ ಅವರುಗಳು ಕಳೆದ ಸಭೆಯಲ್ಲಿ ಸಾರ್ವಜನಿಕರು ನೀಡಿದ ದೂರಿದನ್ವಯ ಬ್ಯಾಕೋಡ-ಕನ್ನೂರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಕಾಮಗಾರಿಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದರೂ ಅವರು ಯಾವುದೇ ಕ್ರಮಗಳನ್ನು ಕೈಗೊಳ್ಳದೇ ಇರುವುದರಿಂದ ಬೇಗನೆ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದರು. ವಿಳಂಬ ಮಾಡಿದ್ದಲ್ಲಿ ಸ್ವಯಂ ಪ್ರೇರಿತ ದೂರನ್ನು ದಾಖಲಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಹಾಜರಿದ್ದ ಮುದ್ದೇಬಿಹಾಳ ತಹಶೀಲ್ದಾರ ಮತ್ತು ನಿಡಗುಂದಿ ತಹಶಿಲ್ದಾರ ಅವರಿಗೆ ಕಂದಾಯ ಇಲಾಖೆಯಲ್ಲಿ ಬಹಳ ದಿನಗಳಿಂದ ಬಾಕಿ ಇರುವ ಪ್ರಕರಣಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ತುರ್ತಾಗಿ ಇತ್ಯರ್ಥಗೊಳಿಸಲು ಸೂಚನೆ ನೀಡಿದರು.

Advertisement

ಅಲ್ಲದೇ, ತಾಲೂಕು ಮಟ್ಟದ ಅಧಿಕಾರಿಗಳಿಗೆ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಯೋಜನೆಯ ಲಾಭ ದೊರೆಯುವಂತೆ ಕಾರ್ಯತತ್ಪರಾಗುವುದು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ಜಾಗೃತಿ ಮೂಡಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಗೌರವಾನ್ವಿತ ಉಪಲೋಕಾಯುಕ್ತ ಅನಿತಾ ಹದ್ದಣ್ಣನವರ, ಡಿವೈಎಸ್ಪಿ ಅರುಣ ಬಿ,ನಾಯಕ, ಪೊಲೀಸ್ ಇನ್ಸ್‍ಪೆಕ್ಟರ್ ಗುರುನಾಥ ಚವ್ಹಾಣ ಹಾಗೂ ಆನಂದ ಠಕ್ಕಣ್ಣವರ ಸೇರಿದಂತೆ ಲೋಕಾಯುಕ್ತ ಇಲಾಖೆ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next