Advertisement

ಸಭೆಗೆ ಗೈರು: ನೋಟಿಸ್‌ ನೀಡಲು ಸೂಚನೆ

05:47 PM Mar 26, 2022 | Team Udayavani |

ತುಮಕೂರು: ಪರಿಶಿಷ್ಟ ಜಾತಿ, ಪಂಗಡದ ಸಮುದಾಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಜರುಗುವ ಸಭೆಗಳಿಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ್‌ ಎಚ್ಚರಿಕೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶೇಷ ಘಟಕ (ಎಸ್‌ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‌ಪಿ)ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲೆಯಲ್ಲಿ ಎಸ್‌ಸಿಪಿ, ಟಿಎಸ್‌ಪಿಯಡಿ ಪ.ಜಾತಿ ಮತ್ತು ವರ್ಗದವರ ಅಭಿವೃದ್ಧಿಗಾಗಿ ನಿಗದಿಯಾಗಿದ್ದ ಅನುದಾನ ಬಳಕೆಗೆ ಸಂಬಂಧಿಸಿದಂತೆ ವರ್ಷಾಂತ್ಯಕ್ಕೆ ಸಾಧಿಸಿದ ಇಲಾಖಾವಾರು ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.

ಕಡಿಮೆ ಸಾಧನೆ: ಕಡಿಮೆ ಹಾಗೂ ಶೂನ್ಯ ಪ್ರಗತಿ ಸಾಧಿಸಿದ ತಿಪಟೂರು ನಗರಸಭೆ, ಚಿಕ್ಕನಾಯಕನಹಳ್ಳಿ ಪುರಸಭೆ, ಗುಬ್ಬಿ ಪಟ್ಟಣ ಪಂಚಾಯತಿ ಅಧಿಕಾರಿ ಗಳಿಂದ ಕಡಿಮೆ ಸಾಧನೆಗೆ ಕಾರಣವೇನೆಂದು ಮಾಹಿತಿ ಪಡೆದರು. ಮೆಚ್ಚುಗೆ: ನಿಗದಿತ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ತುಮಕೂರು ಮಹಾನಗರಪಾಲಿಕೆ, ಕೊರಟಗೆರೆ ಪಪಂ, ಶಿರಾ ನಗರಸಭೆಗಳ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅನುದಾನವನ್ನು ಶೇ. 100ರಷ್ಟು ವೆಚ್ಚ: ಜಿಲ್ಲಾ ಕೈಗಾರಿಕಾ ಕೇಂದ್ರ, ಪಂಚಾಯತ್‌ ರಾಜ್‌ ಇಲಾಖೆ, ತೋಟಗಾರಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹ ಕಾರ, ಮೀನುಗಾರಿಕೆ, ಬೆಸ್ಕಾಂ, ಪಶು ಸಂಗೋಪನೆ, ರೇಷ್ಮೆ ಇಲಾಖೆಗಳು 2021-22ನೇ ಸಾಲಿನಲ್ಲಿ ಎಸ್‌ ಸಿಪಿ ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಶೇ.100ರಷ್ಟು ವೆಚ್ಚ ಮಾಡಿ ಪರಿಶಿಷ್ಟರ ಅಭ್ಯುದಯಕ್ಕೆ ವಿನಿಯೋಗಿಸಲಾಗಿದೆ ಎಂದು ಸಂಬಂಧಿಸಿದ ಇಲಾಖಾವಾರು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಗೆ ಹಾಜರಾಗದ ಉಪ ಅರಣ್ಯ ಸಂರಕ್ಷಣಾಧಿ ಕಾರಿ ಹಾಗೂ ಶಿರಾ ನಗರಸಭೆ ಮುಖ್ಯಾಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್‌ ನೀಡಲು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ ಅವರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಬಾಲ ಕಾರ್ಮಿಕತೆಯನ್ನು ತಡೆಯುವ ನಿಟ್ಟಿನಲ್ಲಿ ಅರಿವು ಮೂಡಿಸುವ ಸಲುವಾಗಿ ಕಾರ್ಮಿಕ ಇಲಾಖೆಯಿಂದ ಹೊರತರಲಾದ ಭಿತ್ತಿಪತ್ರ ವನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.

Advertisement

ಸಭೆಯಲ್ಲಿ ಜಿಪಂ ಸಿಇಒ ಡಾ. ಕೆ. ವಿದ್ಯಾಕುಮಾರಿ, ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು, ರೇಷ್ಮೆ ಇಲಾಖೆ ಉಪನಿರ್ದೇಶಕ ಬಾಲಕೃಷ್ಣಪ್ಪ, ಮಹಾನಗರಪಾಲಿಕೆ ಆಯುಕ್ತೆ ರೇಣುಕಾ, ಕಾರ್ಮಿಕ ಅಧಿಕಾರಿ ರಮೇಶ್‌, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್‌, ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

ಅಂತಿಮ ಪಟ್ಟಿ ತಯಾರಿಸಿ : ಸಭೆಯ ನಂತರ ಮ್ಯಾನ್ಯುಯಲ್‌ ಸ್ಕ್ಯಾವೆಂಜರ್‌ ಗಳ ಅಂತಿಮ ಪಟ್ಟಿಗೆ ಸಂಬಂಧಿಸಿದಂತೆ ತಹಶೀ ಲ್ದಾರರು, ಮನೆ ಮಾಲೀಕರಿಂದ ಲಿಖಿತ ಮಾಹಿತಿ ಪಡೆದು ಅಂತಿಮ ಪಟ್ಟಿಯನ್ನು ತಯಾರಿಸ ಬೇಕೆಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಆಂಜನಪ್ಪ ಅವರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಮರು ಪರಿಶೀಲಿಸಿ :

ಮಧುಗಿರಿ ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಅಲೆಮಾರಿ ಜನಾಂಗದವರಿಗೆ ನಿವೇಶನ ಒದಗಿಸಲು ತಯಾರಿಸಿರುವ ಪಟ್ಟಿಯನ್ನು ಮರು ಪರಿಶೀಲಿಸಬೇಕೆಂದು ಮುಖ್ಯಾಧಿಕಾರಿ ನಜ್ಮಾ ಅವರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next