ದೇವನಹಳ್ಳಿ: ಪರಿಶಿಷ್ಟ ಜಾತಿ, ಪಂಗಡದವರ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ ಕಾರ್ಯಕ್ರಮ ಗಳ ಸಮರ್ಪಕ ಅನುಷ್ಠಾನಕ್ಕೆಅಧಿಕಾರಿಗಳು ಮುಂ ದಾಗಬೇಕು ಎಂದುಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು.
ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತಭವನದಲ್ಲಿರುವ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಡೆದ “ಪರಿಶಿಷ್ಟಜಾತಿ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದ ಮಾಸಿಕ ಪ್ರಗತಿ ಪರಿಶೀಲನಾ ಸಭೆ’ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಯ್ಕೆಯು ನಿಷ್ಪಕ್ಷಪಾತವಾಗಿರಲಿ: ಪರಿಶಿಷ್ಟ ಜಾತಿ, ಗಿರಿಜನ ಉಪಯೋಜನೆಗಳಡಿ2022-23ನೇ ಸಾಲಿ ನಲ್ಲಿ ನಿಗದಿಪಡಿಸಿರುವಭೌತಿಕ ಮತ್ತು ಆರ್ಥಿಕ ಗುರಿ ಸಾಧಿಸಬೇಕುಎಂದರಲ್ಲದೆ, ಯೋಜನೆಗಳಡಿ ಬಿಡುಗಡೆಆಗುವ ಅನುದಾನದಲ್ಲಿ ಆದ್ಯತೆಗೆ ಅನುಗುಣವಾಗಿ ಕ್ರಿಯಾ ಯೋಜನೆ ರೂಪಿಸಿ, ಅಭಿವೃದ್ಧಿ ಕಾಮಗಾರಿ, ಫಲಾನುಭವಿಗಳ ಆಯ್ಕೆ ಕುರಿತ ಅಗತ್ಯದ ಅನುಮೋದನೆಯನ್ನು ಪಡೆದುಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣ ಗೊಳಿಸಲು ಕ್ರಮವಹಿಸಿ. ಅರ್ಹರಿಗೆ ಯೋಜನೆಗಳ ಸೌಲಭ್ಯ ತಲುಪಲು ಫಲಾನುಭವಿಗಳ ಆಯ್ಕೆಯು ನಿಷ್ಪಕ್ಷಪಾತವಾಗಿರಬೇಕು ಎಂದು ಹೇಳಿದರು.
ಅನುದಾನ ಪೂರ್ಣ ಬಳಸಿ: ಪರಿಶಿಷ್ಟ ಜಾತಿ ಹಾಗೂ ಪಂಗಡ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿರುವ ಪ್ರಸಕ್ತ ಸಾಲಿನ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿಬಳಕೆ ಮಾಡಿ, ಶೇಕಡಾ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದರಲ್ಲದೆ, ಯೋಜನೆಗಳನ್ನುಅನುಷ್ಠಾನ ಮಾಡುವಲ್ಲಿ ವಿಫಲವಾದ ಅಧಿಕಾರಿಗಳ ಮೇಲೆ ಎಸ್‌ಸಿ, ಎಸ್‌ಟಿ ಕಾಯ್ದೆ 2013 ರನ್ವಯ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗೈರಾದ ಅಧಿಕಾರಿಗಳಿಗೆ ನೋಟಿಸ್: ಇಲಾಖಾವಾರು ಪ್ರತ್ಯೇಕವಾಗಿ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಪ್ರತಿ ಮಾಹೆ ಜರುಗುವ ಸಭೆಗೆ ಕಡ್ಡಾಯವಾಗಿ ಸಂಬಂಧಿಸಿದ ಅಧಿಕಾರಿಗಳು ಪೂರ್ಣ ಮಾಹಿತಿಯೊಂದಿಗೆ ಹಾಜರಾಗಬೇಕೆಂದು ಸೂಚಿಸಿದರು.
ಪೂರ್ವಾನುಮತಿ ಪಡೆಯದೇ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸಮಾಜ ಕಲ್ಯಾಣಾಧಿಕಾರಿಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ ಇ.ರವಿಕುಮಾರ, ಜಿಪಂ ಮುಖ್ಯ ಯೋಜನಾಧಿಕಾರಿ ನರಸಿಂಹ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಜಂಟಿ ಕೃಷಿ ನಿರ್ದೇಶಕ ಜಯ ಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾನಿರ್ದೇಶಕಿ ಶಾಲಿನಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.