ದೇವನಹಳ್ಳಿ: ಸೋಂಕಿತರ ಪತ್ತೆಗಾಗಿ, ಜಿಲ್ಲೆಯಲ್ಲಿ ಹೆಚ್ಚು ಕೋವಿಡ್ ಪರೀಕ್ಷೆ ನಡೆಸಬೇಕು ಮತ್ತು ಸೋಂಕಿತರ ಪ್ರಾಥಮಿಕ ಸಂಪರ್ಕ ಹಾಗೂ ದ್ವಿತೀಯ ಸಂಪರ್ಕಿತ ವ್ಯಕ್ತಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತಾ ತಿಳಿಸಿದರು.
ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಕೋವಿಡ್ ಸೋಂಕು ತಡೆಗೆ ಕೈಗೊಂಡ ನಿಯಂತ್ರಣ ಕ್ರಮಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇದರ ಅನುಗುಣವಾಗಿ ಹೆಚ್ಚುವರಿ ಹಾಸಿಗೆ ಸೃಷ್ಟಿಸಲು ಹೇಳಿದರಲ್ಲದೆ ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ಪತ್ರೆ ಗಳಲ್ಲಿ ಕಾರ್ಯ ನಿರ್ವಹಿಸಲು ಅಗತ್ಯವಿರುವ ಮಾನವ ಸಂಪನ್ಮೂಲ ಭರ್ತಿಮಾಡಲು, ಜಿಲ್ಲಾಧಿಕಾರಿಗಳು ಕೂಡಲೇ ಪ್ರಸ್ತಾವನೆ, ಸಲ್ಲಿಸಿದರೆ ಕೂಡಲೇ ಸರ್ಕಾರದ ಅನುಮತಿ ಪಡೆಯಲು ಕ್ರಮ ತೆಗದುಕೊಳ್ಳಲಾಗುವುದೆಂದರು. ಡಯಾಲಿಸಿಸ್ ಹಾಗೂ ಇನ್ನಿತರ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ತಾಲೂಕು ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು, ಅಗತ್ಯವಿದ್ದರೆ ಹೆಚ್ಚಿನ ಚಿಕಿತ್ಸೆಗೆ ಸಂಬಂಧಿಸಿದ ಆಸ್ಪತ್ರೆಗಳಿಗೆ ದಾಖಲಿಸಿ ಶೀಘ್ರವಾಗಿ ಚಿಕಿತ್ಸೆ ದೊರಕಿಸಲು ಕ್ರಮ ವಹಿಸಬೇಕೆಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ. ಎನ್.ರವೀಂದ್ರ, 51 ಗಂಟಲು ದ್ರವ ಮಾದರಿ ಸಂಗ್ರಹ ಕೇಂದ್ರ, 61 μàವರ್ ಕ್ಲಿನಿಕ್ ಕಾರ್ಯ ನಿರ್ವಹಿಸುತ್ತಿವೆ. ಇನ್ನು ಸೋಂಕಿನಿಂದ ಮೃತರಾದವರ ದೇಹ ಸಾಗಿಸಲು ತಾಲೂಕುವಾರು 1 ಆ್ಯಂಬುಲೆನ್ಸ್ ಮೀಸಲಿಡಲಾಗಿದೆ .ರೋಗಿಗಳಿಗೂ ಚಿಕಿತ್ಸೆಯಲ್ಲಿ ತೊಂದರೆ ಉಂಟಾಗದಂತೆ ಆರೋಗ್ಯ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಸಿಇಒ ಎನ್.ಎಂ.ನಾಗರಾಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೆàಕ್ಷಣಾಧಿಕಾರಿ ಧರ್ಮೆàಂದ್ರ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಆರೋಗ್ಯ ಅಧಿಕಾರಿಗಳು ಇದ್ದರು.