ಮಡಿಕೇರಿ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಇತ್ತೀಚೆಗೆ ಜಿಲ್ಲೆಯಲ್ಲಿ ನಡೆಸಿದ ಜನಸಂಪರ್ಕ ಅಭಿಯಾನದ ಪ್ರಗತಿಯನ್ನು ಕೊಡಗು ಕಾಂಗ್ರೆಸ್ ಉಸ್ತುವಾರಿ ಸಮಿತಿಯ ಪ್ರಮುಖರು ಪರಿಶೀಲಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಉಸ್ತುವಾರಿ ಸಮಿತಿಯ ಪ್ರಮುಖರಾದ ಮಾಜಿ ಶಾಸಕ ಎನ್.ಸಂಪಗಿ, ಕೆಪಿಸಿಸಿ ಕಾರ್ಯದರ್ಶಿ ಗುರುಪಾದ ಸ್ವಾಮಿ, ಬಲರಾಮ್ ಹಾಗೂ ಮೈಸೂರು ವಿಭಾಗದ ಸಂಯೋಜಕ ಪಿ.ಗಾಂಧಿ ಅವರುಗಳು ಜನಸಂಪರ್ಕ ಅಭಿಯಾನದ ಪ್ರಗತಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಪಣತೊಡುವಂತೆ ಕರೆ ನೀಡಿದರು.
ವಿಧಾನಪರಿಷತ್ ಸದಸ್ಯೆ ವೀಣಾಅಚ್ಚಯ್ಯ, ಕೆಪಿಸಿಸಿ ಹಿರಿಯ ಉಪಾಧ್ಯಕ್ಷ ಮಿಟ್ಟುಚಂಗಪ್ಪ, ಮಾಜಿ ಸಚಿವ ವಿಜಯಶಂಕರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ವೆಂಕಪ್ಪಗೌಡ, ವಿರಾಜಪೇಟೆ ಕ್ಷೇತ್ರದ ಉಸ್ತುವಾರಿ ಟಿ.ಎ.ಶಾಹಿದ್, ಕೆಪಿಸಿಸಿ ಸದಸ್ಯರುಗಳಾದ ಟಿ.ಪಿ.ರಮೇಶ್, ನಟೇಶ್ ಗೌಡ ತಾರಾಅಯ್ಯಮ್ಮ, ಜೋಸೆಫ್ ಶ್ಯಾಂ, ಜಿ.ಪಂ ಮಾಜಿ ಅಧ್ಯಕ್ಷ ಜೆ.ಎ.ಕರುಂಬಯ್ಯ, ಮುಂಚೂಣಿ ಘಟಕಗಳ ಅಧ್ಯಕ್ಷರು, ಎಲ್ಲಾ ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ,ತಾ.ಪಂ ಮತ್ತು ನಗರಸಭೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಡಿಸಿಸಿ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು