Advertisement

ಮಹಿಳಾ ಸಬಲೀಕರಣಕ್ಕೆ ವಾತಾವರಣ ನಿರ್ಮಿಸಿ

03:41 PM Oct 09, 2020 | Suhan S |

ಮಂಡ್ಯ: ಜಿಲ್ಲೆಯಲ್ಲಿರುವ ನಿರ್ಗತಿಕರು, ಅಸಹಾಯಕರು, ಬಡವರು ಸೇರಿದಂತೆ ಮಹಿಳೆಯರಿಗೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ ನೀಡುವ ಮೂಲಕ ಮಹಿಳೆಯರ ಸಬಲೀಕರಣ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ.ಟಿಂಗಳಿ ಹೇಳಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ನಡೆದ ನಿಗಮದ ವಿವಿಧಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶೇ.100ರಷ್ಟು ಪ್ರಗತಿ ಸಾಧಿಸಲಿ: ಈಗಾಗಲೇ 16 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು, ಕೆಲವೊಂದು ಜಿಲ್ಲೆ ಯಲ್ಲಿ ತೃಪ್ತಿದಾಯಕಕೆಲಸಗಳು ಆಗಿಲ್ಲ. ಮಂಡ್ಯ ಜಿಲ್ಲೆ ಯಲ್ಲಿ ಸ್ವಲ್ಪ ತೃಪ್ತಿದಾಯಕವಾಗಿದೆ. ಆದರೆ, ಇನ್ನೂಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಂಕಷ್ಟದಲ್ಲಿದ್ದವರಿಗೆ ನೆರವಾಗಿ: ಬೀದಿಬದಿ ಮಹಿಳಾ ವ್ಯಾಪಾರಿಗಳಿಗೆ, ನಿರ್ಗತಿಕರಿಗೆ, ಅಸಹಾಯಕ ಮಹಿಳೆಯರು ಸೇರಿದಂತೆ ಇನ್ನಿತರೆ ಸಂಕಷ್ಟದಲ್ಲಿರುವ ಮಹಿಳೆಯರ ನೆರವಿಗೆ ನಿಗಮ ಮಂಡಳಿ ನಿಲ್ಲಬೇಕಿದೆ. ನಿಗಮದಿಂದ ಸಿಗುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಫ‌ಲಾನುಭವಿಗಳಿಗೆ ತಲುಪಿಸುವ ಮೂಲಕ ಆರ್ಥಿಕ ಸಬಲರನ್ನಾಗಿ ಮಾಡಬೇಕಾಗಿದೆ. ಬ್ಯಾಂಕ್‌ಗಳಿಂದ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ಕೋವಿಡ್ ಸಂಕಷ್ಟದಲ್ಲಿ ಮಹಿಳೆಯರು ಸಬಲರಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಪ್ರಾಮಾಣಿಕವಾಗಿ ಕೆಲಸ ಮಾಡಿ: ಜಿಲ್ಲೆಯಲ್ಲಿ ನೀಡಿದ ಭೌತಿಕ ಗುರಿಯನ್ನು ಶೇ.100ರಷ್ಟು ಸಾಧಿಸ ಬೇಕು. ಅಧಿಕಾರಿಗಳು ಪ್ರಾಮಾಣಿಕವಾಗಿ ಫ‌ಲಾನುಭವಿಗಳನ್ನು ಗುರುತಿಸುವ ಕೆಲಸ ಮಾಡಬೇಕು. ಫ‌ಲಾ ನುಭವಿಗಳು ಸಾಲವನ್ನು ಪಡೆದುಕೊಂಡು ಸ್ವಾವಲಂಬಿಯಾಗಿ ಸ್ವಯಂ ಉದ್ಯೋಗ ಕೈಗೊಂಡು ನಿಗದಿತ ವೇಳೆಯಲ್ಲಿ ಮರು ಪಾವತಿ ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗುವಂತೆ ಗಮನ ಹರಿಸಬೇಕು. ಸಾಲ ತೆಗೆದುಕೊಂಡವರು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಂಡಿದ್ದಾರೆಯೇ ಎಂಬುದರ ಬಗ್ಗೆ ಆಗಾಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸ ಬೇಕು ಎಂದು ಸೂಚಿಸಿದರು.

Advertisement

ಸ್ವಸಹಾಯ ಸಂಘಗಳ ತಂಡ ರಚಿಸಿ: ಜಿಲ್ಲೆಯಲ್ಲಿರುವಸ್ವ ಸಹಾಯ ಸಂಘಗಳಲ್ಲಿರುವ ಒಬ್ಬೊಬ್ಬರು ಸದಸ್ಯರನ್ನು ಕೂಡಿಸಿ ಒಂದು ತಂಡ ರಚಿಸಿ, ಅದರ ಮೂಲಕ ಕೌಶಲ್ಯಾಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುವಂತೆಮಾಡಬೇಕು. ಅವರಿಗೆ ಅಗತ್ಯವಾದ ಮಾರುಕಟ್ಟೆಕಲ್ಪಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಹೇಳಿದರು. ಸಭೆಯಲ್ಲಿ ಜಿಪಂ ಸಿಇಒ ಎಸ್‌.ಎಂ.ಜುಲ್ಫಿಕರ್‌

ಉಲ್ಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಕದರಪ್ಪ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next