Advertisement
ಐಟಿ ಪಾರ್ಕ್‌ನಕೆಯುಐಡಿಎಫ್‌ಸಿ ಬೋರ್ಡ್ ರೂಮ್‌ನಲ್ಲಿ ಶುಕ್ರವಾರ ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಟೆಂಡರ್ ಕರೆದು ಕಾರ್ಯಾದೇಶ ನೀಡಿದ ಕಾಮಗಾರಿಗಳನ್ನು ನಿಗದಿತಅವಧಿಯೊಳಗೆ ಪೂರ್ಣಗೊಳಿಸಬೇಕು. ಈಗಾಗಲೇ ಉದ್ಘಾಟನೆಯಾಗಿ ಸಾರ್ವಜನಿಕರಿಗೆ ಬಳಕೆಯಾಗುತ್ತಿರುವ ಯೋಜನೆಗಳ ಸ್ಥಳದಲ್ಲಿ ಸ್ಮಾರ್ಟ್ ಸಿಟಿ ಲಾಂಛನ ಹಾಗೂ ಕಾಮಗಾರಿ ವೆಚ್ಚದ ಬಗ್ಗೆ ಮಾಹಿತಿ ಫಲಕ ಅಳವಡಿಸಿ ಎಲ್ಲಾ ವಿವರಗಳನ್ನು ಸಾರ್ವಜನಿಕರಿಗೆ ಮುಕ್ತವಾಗಿ ಒದಗಿಸಬೇಕು. ಕಾಮಗಾರಿ ವಿಳಂಬ ಮಾಡುವ ಗುತ್ತಿಗೆದಾರರಿಗೆ ನೋಟಿಸ್ ನೀಡಬೇಕು. ಯೋಜನೆಯಡಿ ಅಭಿವೃದ್ಧಿ ಪಡಿಸುತ್ತಿರುವ ಎಲ್ಲಾ ರಸ್ತೆಗಳನ್ನು ಡಿಸೆಂಬರ್ ಅಂತ್ಯದ ವೇಳೆ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.
Related Articles
Advertisement
ಅವಳಿನಗರ ರಾಜ್ಯಕ್ಕೆ ಪ್ರಥಮ : ರಾಜ್ಯದ ಏಳು ನಗರಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನವಾಗುತ್ತಿದೆ. ಈ ನಗರಗಳ ಪೈಕಿ ಹುಬ್ಬಳ್ಳಿ-ಧಾರವಾಡ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ. ಕರ್ನಾಟಕ ರಾಜ್ಯ ದೇಶದಲ್ಲಿ ಐದನೇ ಸ್ಥಾನದಲ್ಲಿದೆ. ಅವಳಿನಗರದಲ್ಲಿ ಒಟ್ಟು 80 ಕೋಟಿ ರೂ. ವೆಚ್ಚದ ಹೊಸ ಯೋಜನೆಗಳು, ವಿಸ್ತೃತ ಯೋಜನಾ ವರದಿ ಹಂತದಿಂದ ಟೆಂಡರ್ ಹಂತಕ್ಕೆ ಬಂದು ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ| ರವಿಕುಮಾರ ಸುರಪುರ ಹೇಳಿದರು.
ಸುಗಮ ಸಂಚಾರಕ್ಕೆ ಯೋಜನೆ : ಅವಳಿನಗರದ ರಸ್ತೆಗಳಲ್ಲಿ ಮಾರ್ಗದರ್ಶನ ನೀಡುವ ಸೈನ್‌ಬೋರ್ಡ್‌ಗಳಿಲ್ಲ. ಟ್ರಾಫಿಕ್ ಸಿಗ್ನಲ್‌ಗಳ ಕಾರ್ಯಕ್ಷಮತೆ ಹೆಚ್ಚಬೇಕು. ಸಂಚಾರಿವೃತ್ತಗಳಲ್ಲಿ ಜಿಬ್ರಾ ಕ್ರಾಸಿಂಗ್ ಪಟ್ಟಿಗಳಿರಬೇಕು. ಮುಂದಿನ ಹಲವು ವರ್ಷಗಳನ್ನು ಯೋಚಿಸಿ ರಸ್ತೆಗಳ ಅಗಲೀಕರಣ ಕೈಗೊಳ್ಳಿ. ಮುಂದಿನಸಭೆಯ ವೇಳೆ ಅವಳಿನಗರದ ಸಂಚಾರ ವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಸಭೆ ನಡೆಸುತ್ತೇನೆ. – ಡಾ| ರವಿಕುಮಾರ ಸುರಪುರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ