ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ, ಮುಂದಿನ ನಡೆ ಕುರಿತು, ಪ್ರಗತಿಪರ ಚಿಂತಕರು ಮತ್ತು ವಿಚಾರವಾದಿಗಳು ನಗರದ ಹೋಟೆಲೊಂದರಲ್ಲಿ ಶುಕ್ರವಾರ ಚರ್ಚೆ ನಡೆಸಿದ್ದು, ಚುನಾವಣೆಯಲ್ಲಿ ಕೋಮುವಾದಿ ಶಕ್ತಿಗಳನ್ನು ಸೋಲಿಸಬೇಕೆಂಬ ಒಮ್ಮತದ ತೀರ್ಮಾನಕ್ಕೆ ಬಂದರು. ಸಭೆಯಲ್ಲಿ ಸ್ವಾತಂತ್ರÂ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಸಾಹಿತಿಗಳಾದ ಪ್ರೊ.ಮರುಳಸಿದ್ದಪ್ಪ, ಕನ್ನಡ ಅಭಿವೃದಿಟಛಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ, ಚಂದ್ರಶೇಖರ ಪಾಟೀಲ, ಪ್ರೊ.ಬಿ.ಕೆ.ಚಂದ್ರಶೇಖರ್, ಡಾ.ಕೆ.ಶರೀಫಾ, ಡಾ. ವಿಜಯಮ್ಮ, ಬಿ.ಟಿ.ಲಲಿತಾ ನಾಯ್ಕ, ಡಾ.ಎಲ್. ಹನುಮಂತಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.
ಸಭೆ ಬಳಿಕ ಮಾತನಾಡಿದ ಪ್ರೊ.ಮರುಳಸಿದ್ದಪ್ಪ ಮಾತನಾಡಿ, ಸೇನೆಯ ಸಾಧನೆಯನ್ನು ರಾಜಕೀಯವಾಗಿ ಬಳಕೆ ಮಾಡಲಾಗುತ್ತಿದೆ. ಸರ್ಕಾರದ ವಿರುದ್ಧ ಮಾತನಾಡಿದರೆ ದೇಶ ವಿರೋಧಿಗಳು ಎಂಬ ಪಟ್ಟ ಕಟ್ಟುತ್ತಾರೆ. ಕೋಮುವಾದಿಗಳು ಮತ್ತೆ ಅಧಿಕಾರಕ್ಕೆ ಬಂದರೆ, ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕಲಿದೆ. ಹೀಗಾಗಿ, ಈ ಬಾರಿ ಪ್ರಜ್ಞಾಪೂರ್ವಕವಾಗಿ ಮತ ಚಲಾಯಿಸಬೇಕಿದೆ ಎಂದು ಹೇಳಿದರು.
ಮರೆಮಾಚಲಾಗುತ್ತಿದೆ: ಪ್ರಗತಿ ಪರ ಚಿಂತಕಿ ಬಿ.ಟಿ.ಲಲಿತಾ ನಾಯ್ಕ ಮಾತನಾಡಿ, ಕೆಲ ಮಾಧ್ಯಮಗಳು ಉದ್ದೇಶ ಪೂರ್ವಕವಾಗಿಯೇ ಮಂಡ್ಯ ಲೋಕಸಭೆ ಕ್ಷೇತ್ರದ ಬೆಳವಣಿಗೆಗಳ ಕುರಿತು ಹೆಚ್ಚು ಸುದ್ದಿ ಮಾಡುತ್ತಿವೆ. ಆದರೆ, ಕೇಂದ್ರ ಸರ್ಕಾರದ ವೈಫಲ್ಯಗಳನ್ನು ತಿಳಿಸುವಲ್ಲಿ ವಿಫಲವಾಗಿವೆ ಎಂದು ಟೀಕಿಸಿದರು.