Advertisement

ಗೋಹತ್ಯೆ ನಿಷೇಧ ಕಾಯ್ದೆ: ಅಧಿವೇಶನದಲ್ಲಿ ಮಂಡನೆ

07:08 AM Jul 11, 2020 | Lakshmi GovindaRaj |

ಬೆಂಗಳೂರು: ರಾಜ್ಯದಲ್ಲಿ ಉತ್ತರ ಪ್ರದೇಶ ಹಾಗೂ ಗುಜರಾತ್‌ ಮಾದರಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ನಿರ್ಧರಿ ಸಲಾಗಿದೆ ಎಂದು ಪಶು ಸಂಗೋ ಪನಾ ಸಚಿವ ಪ್ರಭು ಚೌವ್ಹಾಣ್‌ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ, ಕೋವಿಡ್‌ 19 ನಿಯಂ ತ್ರಣಕ್ಕೆ ಬಂದ ನಂತರ ಉತ್ತರ ಪ್ರದೇಶ ಹಾಗೂ ಗುಜರಾತ್‌ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ಸರ್ಕಾರಗಳು ಜಾರಿಗೆ ತಂದಿರುವ ಕಾಯ್ದೆ ಬಗ್ಗೆ ಮಾಹಿತಿ ಪಡೆದು ಸಿಎಂ ಯಡಿಯೂರಪ್ಪ ಜತೆ ಚರ್ಚಿಸಿ  ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದರು.

Advertisement

2010ರಲ್ಲಿ ಕರ್ನಾಟಕ ಗೋ ಹತ್ಯೆ ಪ್ರತಿ ಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964 ಬದಲಾಗಿ, “ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ 2010   ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನಮಂಡಲದಲ್ಲಿ ಮಂಡನೆ ಆಗಿದೆ. ಕೇಂದ್ರ ಗೃಹ ಇಲಾಖೆ ಕೆಲ ಆಕ್ಷೇಪಣೆ ವ್ಯಕ್ತಪಡಿಸಿ ತಿದ್ದುಪಡಿಗೆ ಸೂಚನೆ ನೀಡಿತ್ತು. ಆದರೆ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗೋಹತ್ಯೆ ನಿಷೇದ ಕಾಯ್ದೆ 1964ನ್ನು ಮುಂದುವರಿಸಿತ್ತು.

ಈಗ ಆ ಕಾಯ್ದೆಗೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದ್ದು ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಮಾಡಲಾಗುವುದು ಎಂದು ಹೇಳಿದ್ದಾರೆ. ಕೋವಿಡ್‌ 19 ಸಂದರ್ಭದಲ್ಲಿ ಎಲ್ಲ ಜಿಲ್ಲಾ ಪ್ರವಾಸ ಕೈಗೊಂಡು ಅಧಿಕಾರಿಗಳು  ಗ್ರಾಮೀಣ ಪ್ರದೇಶಕ್ಕೆ ತೆರಳುವಂತೆ ಸೂಚಿಸಲಾಗಿದೆ. ಜಾನುವಾರುಗಳಿಗೆ ಯಾವುದೇ ರೀತಿಯ ಸಮಸ್ಯೆಯಾದರೂ ತಕ್ಷಣ ಸ್ಪಂದಿಸಲು 16 ಜಿಲ್ಲೆಗಳಲ್ಲಿ ಪಶು ಆ್ಯಂಬುಲೆನ್ಸ್‌  ನೀಡಲು ತೀರ್ಮಾನಿಸಲಾಗಿದೆ.

ಈ ಯೋಜನೆಯನ್ನು ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು. ಸಾರ್ವಜ ನಿಕರಿಗೆ ಯಾವುದೇ ಸಮಸ್ಯೆಯಾದರೂ ದಿನದ 24 ಗಂಟೆ ಸ್ಪಂದಿಸಲು ವಾರ್‌ ರೂಮ್‌ ವ್ಯವಸ್ಥೆ  ಮಾಡಲಾಗುವುದು ಎಂದರು. ಗೋವುಗಳ ರಕ್ಷಣೆಗೆ ಗೋಸೇವಾ ಆಯೋಗ ರಚನೆ ಮಾಡಲು ತೀರ್ಮಾನ ಮಾಡಲಾಗಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ 20 ಎಕರೆಯಲ್ಲಿ ರಾಜ್ಯದಲ್ಲಿಯೇ ಮೊದಲ ವಧಾಗಾರ ಮಾಡಲಾಗುತ್ತಿದೆ  ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next