Advertisement
ಅತ್ತಿಬೆಲೆ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ವಹಿಸಿರುವ ಸಿಎಂ ಸಿದ್ದರಾಮಯ್ಯ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸುಪ್ರೀಂ ಕೋರ್ಟ್ ಆದೇಶ ಜಾರಿಗೆ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು.
Related Articles
Advertisement
ಪ್ರತಿವರ್ಷ ನವೀಕರಣ
ಇದುವರೆಗೆ ಒಮ್ಮೆ ಪರವಾನಿಗೆ ಪಡೆದರೆ 5 ವರ್ಷದವರಗೆ ಅದು ಊರ್ಜಿತದಲ್ಲಿರುತ್ತಿತ್ತು. ಆದರೆ ಇನ್ನು ಮುಂದೆ ಪ್ರತೀ ವರ್ಷವೂ ಪರವಾನಿಗೆ ಪಡೆಯಬೇಕು ಎಂದು ಸಿಎಂ ಹೇಳಿದ್ದಾರೆ. ಪರವಾನಿಗೆ ಪಡೆದವರು ಹಿಂದಿನ ವರ್ಷ ಷರತ್ತು, ನಿಬಂಧನೆಗಳಿಗೆ ತಕ್ಕಂತೆ ನಡೆದುಕೊಂಡಿದ್ದರೆ ಮಾತ್ರ ನವೀಕರಿಸಬಹುದು. ಇಲ್ಲದಿದ್ದರೆ ನಿರಾಕರಿಸಬೇಕು ಸಿಎಂ ಹೇಳಿದ್ದಾರೆ.
ಅಧಿಕಾರಿಗಳ ಅಮಾನತು
ಅತ್ತಿಬೆಲೆ ದುರಂತದಲ್ಲಿ ತಹಸೀಲ್ದಾರ್, ಪೊಲೀಸ್ ಇನ್‌ಸ್ಪೆಕ್ಟರ್, ಅಗ್ನಿಶಾಮಕ ದಳದ ಮುಖ್ಯಾಧಿಕಾರಿ ಕರ್ತವ್ಯಲೋಪ ಎದ್ದುಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅದರ ಜತೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನೋಟಿಸ್ ನೀಡಲು ಸೂಚಿಸಲಾಗಿದೆ ಎಂದರು.
ದೀಪಾವಳಿಗೆ ಮುನ್ನೆಚ್ಚರಿಕೆ
ದೀಪಾವಳಿ ಸಂದರ್ಭ ಪ್ರತೀ ಬಾರಿ ಅನೇಕರು ಕಣ್ಣು ಕಳೆದುಕೊಳ್ಳುವುದು, ಸುಟ್ಟ ಗಾಯಗಳಾಗುವುದು, ಸಾಯುವಂತಹ ಪ್ರಸಂಗಗಳನ್ನೂ ಕಾಣುತ್ತಿದ್ದೇವೆ. ಹೀಗಾಗಿ ಸುಪ್ರೀಂ ಕೋರ್ಟ್ ಮತ್ತು ಹಸುರು ನ್ಯಾಯಪೀಠದ ಆದೇಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ. ಹಸುರು ಪಟಾಕಿಗಳ ಸರಬರಾಜು, ದಾಸ್ತಾನು ಹಾಗೂ ಮಾರಾಟವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಿಎಂ ಸೂಚಿಸಿದರು.
ರಾಜಕೀಯ ಸಮಾವೇಶ, ಮದುವೆ, ಶುಭ ಸಮಾರಂಭಗಳಲ್ಲೂ ಇನ್ನು ಮುಂದೆ ಅಪಾಯಕಾರಿ ಪಟಾಕಿಗಳ ಬದಲು ಹಸುರು ಪಟಾಕಿ ಬಳಕೆಗೆ ಮಾತ್ರ ಅವಕಾಶ ನೀಡಲಾಗಿದೆ. ಇನ್ನು ಮುಂದೆ ಪ್ರತೀ ವರ್ಷವೂ ಪರವಾನಿಗೆ ನವೀಕರಿಸಬೇಕು. ಕಾನೂನು ಉಲ್ಲಂ ಸಿದವರ ಪರವಾನಿಗೆ ರದ್ದುಪಡಿಸಲಾಗುತ್ತದೆ.
ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ