Advertisement

ಬೀದರನಲ್ಲಿ ಈಜುಕೊಳ-ಜಿಮ್‌ಗೆ ನಿಷೇಧ

08:04 PM Apr 04, 2021 | Team Udayavani |

ಬೀದರ: ಕೋವಿಡ್‌-19 ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶಿಸಿದಂತೆ ಜನಹಿತ ದೃಷ್ಟಿಯಿಂದಾಗಿ ಬೀದರ ಜಿಲ್ಲೆಯಲ್ಲಿ ಕೂಡ ಈಜುಕೊಳ, ಜಿಮ್‌ ಸೆಂಟರ್‌ಗಳ ನಿಷೇಧ ಜಾರಿಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌ ತಿಳಿಸಿದರು.

Advertisement

ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿ  ಕಾರಿಗಳೊಂದಿಗೆ ಶನಿವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನೀಡಿದ ನಿರ್ದೇಶನದಂತೆ, ಬೀದರ ಜಿಲ್ಲೆಯಲ್ಲಿ ಸಿನೇಮಾ ಮಂದಿರಗಳು ಕೂಡ ಕೋವಿಡ್‌ ನಿಯಮ ಪಾಲನೆ ಮಾಡಬೇಕು ಎಂದರು. ಬೀದರ ಜಿಲ್ಲೆಯಲ್ಲಿ ಕೋವಿಡ್‌-19 ಲಸಿಕೆ ನೀಡಿಕೆ ಮತ್ತು ಕೋವಿಡ್‌-19 ಟೆಸ್ಟ್‌ ಗುರಿಯನುಸಾರ ಪ್ರಗತಿ ತೋರಲು, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಶ್ರದ್ಧೆ ಮತ್ತು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ವಿಡಿಯೋ ಸಂವಾದದಲ್ಲಿ ಜಿಪಂ ಸಿಇಒ ಜಹೀರಾ ನಸೀಮ್‌, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ನಾಗೇಶ ಡಿ.ಎಲ್‌., ಅಪರ ಜಿಲ್ಲಾ ಧಿಕಾರಿ ರುದ್ರೇಶ ಗಾಳಿ, ಡಿಎಚ್‌ಒ ಡಾ| ವಿ.ಜಿ.ರೆಡ್ಡಿ, ಬ್ರಿಮ್ಸ್‌ ನಿರ್ದೇಶಕ ಡಾ| ಶಿವಕುಮಾರ ಹಾಗೂ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next