Advertisement

ಅನ್ಯ ಧರ್ಮದ ಪ್ರಾರ್ಥನಾ ಮಂದಿರಗಳ ತಸ್ತೀಕ್‌ಗೆ ತಡೆ

02:21 AM Jun 10, 2021 | Team Udayavani |

ಬೆಂಗಳೂರು : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಅನ್ಯ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್‌ ರೂಪದಲ್ಲಿ ಹಣ ನೀಡುವುದನ್ನು ತಡೆ ಹಿಡಿಯಲು ಆದೇಶ ಮಾಡಿರುವುದಾಗಿ ಮುಜರಾಯಿ ಸಚಿವ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Advertisement

ಇತರ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಹಣದ ಆವಶ್ಯಕತೆಯಿದ್ದಲ್ಲಿ ಆಯಾ ಇಲಾಖೆಯಿಂದ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ಹೇಳಿದ್ದಾರೆ.

ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಮಸೀದಿ, ಮದ್ರಸಾಗಳಿಗೆ ತಸ್ತೀಕ್‌ ನೀಡುವುದಕ್ಕೆ ವಿಹಿಂಪ, ಬಜರಂಗದಳ ಸಹಿತ ಹಿಂದೂ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next