Advertisement

ಉಡುಪಿ/ಮಂಗಳೂರು: ಇನ್ನಷ್ಟು ಏಕಬಳಕೆ ಪ್ಲಾಸ್ಟಿಕ್‌ ವಸ್ತುಗಳ ಬಳಕೆ ನಿಷೇಧ

12:07 AM Jun 24, 2022 | Team Udayavani |

ಉಡುಪಿ/ಮಂಗಳೂರು: ರಾಜ್ಯ ಸರಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳಾದ ಕ್ಯಾರಿ ಬ್ಯಾಗ್‌, ಬ್ಯಾನರ್‌, ಬಂಟಿಂಗ್ಸ್‌, ಫ್ಲೆಕ್ಸ್‌, ಪ್ಲೇಟ್‌, ಧ್ವಜ, ಕಪ್‌, ಸ್ಪೂನ್‌, ಅಂಟಿಕೊಳ್ಳುವ ಫಿಲ್ಮ್, ಡೈನಿಂಗ್‌ ಟೇಬಲ್‌ನಲ್ಲಿ ಹರಡಲು ಬಳಸುವ ಹಾಳೆ, ಸ್ಟ್ರಾ, ಥರ್ಮಕೋಲ್‌ ಮತ್ತು ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳನ್ನು ಈಗಾಗಲೇ ನಿಷೇಧಿಸಲಾಗಿದೆ.

Advertisement

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾ ವಣೆ ಸಚಿವಾಲಯದ ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮದಂತೆ ನಿಷೇಧಿತ ಉತ್ಪನ್ನಗಳ ಜತೆಗೆ ಹೆಚ್ಚುವರಿ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳಾದ ಸ್ಟಿಕ್‌ಗಳೊಂದಿಗೆ ಇಯರ್‌ ಬಡ್ಸ್‌, ಬಲೂನ್‌ಗಳಿಗೆ ಬಳಸುವ ಸ್ಟಿಕ್‌, ಕ್ಯಾಂಡಿ ಸ್ಟಿಕ್‌, ಐಸ್‌ಕ್ರೀಂ ಸ್ಟಿಕ್‌, ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟೈರೀನ್‌ ಅಥವಾ ಥರ್ಮಕೋಲ್‌, ಲೋಟ,

ಫೋರ್ಕ್‌, ಚಾಕು, ಟ್ರೇಗಳಂತಹ ಕಟ್ಲರಿಗಳು, ಸ್ವೀಟ್‌ ಬಾಕ್ಸ್‌ಗಳ ಸುತ್ತ ಸುತ್ತುವ ಅಥವಾ ಪ್ಯಾಕಿಂಗ್‌ ಫಿಲ್ಮ್ಗಳು, ಆಮಂತ್ರಣ ಪತ್ರ ಮತ್ತು ಸಿಗರೇಟ್‌ ಪ್ಯಾಕೆಟ್‌, 100 ಮೈಕ್ರಾನ್‌ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್‌ ಅಥವಾ ಪಿವಿಸಿ ಬ್ಯಾನರ್‌ಗಳು, ಪ್ಲಾಸ್ಟಿಕ್‌ ಸ್ಟಿರರ್‌ಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಜು. 1ರಿಂದ ನಿಷೇಧಿಸಲಾಗುವುದು.

ಈ ಎಲ್ಲ ವಸ್ತುಗಳ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ವ್ಯಾಪಾರಿಗಳು, ಅಂಗಡಿ ಮಾಲಕರು, ಇ-ಕಾಮರ್ಸ್‌ ಕಂಪೆನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು, ಮಾಲ್‌ಗ‌ಳು, ಆಸ್ಪತ್ರೆ, ಸಾಮಾನ್ಯ ಸಾರ್ವಜನಿಕರು ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಲ್ಲಿಸಬೇಕು ಹಾಗೂ ಏಕ ಬಳಕೆ ಪ್ಲಾಸ್ಟಿಕ್‌ಗಳ ಶೂನ್ಯ ದಾಸ್ತಾನುಗಳನ್ನು ಖಚಿತ ಪಡಿಸಿಕೊಳ್ಳಲು ಜೂ. 30ರೊಳಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next