Advertisement

ಬಜೆಟ್‌ ಅಧಿವೇಶನ ಹಿನ್ನೆಲೆ: ಮಾ.4ರಿಂದ ಮಾ.30ವರೆಗೆ ನಿಷೇಧಾಜ್ಞೆ

10:02 PM Feb 28, 2022 | Team Udayavani |

ಬೆಂಗಳೂರು: ಬಜೆಟ್‌ ಅಧಿವೇಶನ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಾ. 4ರಿಂದ ಮಾ.30ರ ವರೆಗೆ ವಿಧಾನಸೌಧ ಹಾಗೂ ಸುತ್ತಮುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಆದೇಶಿಸಿದ್ದಾರೆ.

Advertisement

ಬಜೆಟ್‌ ಅಧಿವೇಶನದ ಅವಧಿಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ ಇತರೆ ಹೋರಾ ಟ ಗಳು ನಡೆ ಯುವ ಸಾಧ್ಯ ತೆ ಯಿದೆ. ಅದರಿಂದ ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆ, ಸಾರ್ವಜನಿಕ ನೆಮ್ಮದಿಗೆ ಭಂಗ, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ಹೀಗಾಗಿ ಅಧಿವೇಶನದ ಕಾರ್ಯಕಲಾಪಗಳು ಸುಗಮವಾಗಿ ನಡೆಯಲು ಅನುವಾಗುವಂತೆ ಅಧಿವೇಶನ ನಡೆಯುವ 26 ದಿನಗಳ ಕಾಲ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಿಷೇಧಾಜ್ಞೆ ಜಾರಿಯಾಗುವ ಪ್ರದೇಶಗಳಲ್ಲಿ ಐದು ಅಥವಾ ಅಧಕ್ಕಿಂತ ಹೆಚ್ಚಿನ ಜನರು ಗುಂಪು ಸೇರುವಂತಿಲ್ಲ. ಮೆರವಣಿಗೆ ಮತ್ತು ಸಭೆ ನಡೆಸುವಂತಿಲ್ಲ. ಶಸ್ತ್ರಾಸ್ತ್ರಗಳು, ದೊಣ್ಣೆ, ಕತ್ತಿ, ಕಲ್ಲು ಇಟ್ಟಿಗೆ ಸೇರಿ ಯಾವುದೇ ಮಾರಕಾಸ್ತ್ರಗಳು, ಸ್ಫೋಟಕ ವಸ್ತು ಸಿಡಿಸುವುದು, ಕಲ್ಲು, ಕ್ಷಿಪಣಿಗಳನ್ನು ಎಸೆಯುವ ಸಾಧನೆಗಳ ಅಥವಾ ಉಪಕರಣಗಳನ್ನು ಒಯ್ಯುವಂತಿಲ್ಲ. ವ್ಯಕ್ತಿಗಳ, ಶವಗಳ ಪ್ರತಿಕೃತಿ ಪ್ರದರ್ಶನ, ಭಿತ್ತಿ ಪತ್ರ ಸೇರಿದಂತೆ ಯಾವುದೇ ವಸ್ತುಗಳು ಹಾಗೂ ಪದಾರ್ಥಗಳ ಪ್ರದರ್ಶನ ನಿಷೇಧಿಸಲಾಗಿದೆ. ಒಂದು ವೇಳೆ ಆದೇಶ ಉಲ್ಲಂಘಿ ಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ನಗರ ಪೊಲೀಸ್‌ ಆಯುಕ್ತರು ಆದೇಶದಲ್ಲಿ ಎಚ್ಚ ರಿಕೆ ನೀಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next