Advertisement

ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಗಳೊಂದಿಗೆ ನಿಷೇಧಾಜ್ಞೆ

04:40 PM Aug 04, 2022 | Team Udayavani |

ಮಂಗಳೂರು : ಸರಣಿ ಹತ್ಯೆಗಳ ಬಳಿಕ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ನಗರ  ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಗಳೊಂದಿಗೆ ನಿಷೇಧಾಜ್ಞೆ ವಿಸ್ತರಿಸಿ ನಗರ ಪೊಲೀಸ್ ಕಮಿಷನರ್ ಶಶಿ ಕುಮಾರ್ ಗುರುವಾರ ಆದೇಶ ಹೊರಡಿಸಿದ್ದಾರೆ.

Advertisement

ಆಗಸ್ಟ್ 8ರ ಬೆಳಗ್ಗೆ 6 ರ ವರೆಗೆ ನಿರ್ಬಂಧ ಹೇರಲಾಗಿದ್ದು, 18 ವರ್ಷ ಮೇಲ್ಪಟ್ಟ ಯುವಕರು ಬೈಕ್ ನಲ್ಲಿ ಸಹ ಸವಾರರ ಸಂಚಾರಕ್ಕೆ ಅವಕಾಶವಿರುವುದಿಲ್ಲ, ಮಹಿಳೆಯರು, 60 ವರ್ಷ ಮೇಲ್ಪಟ್ಟ ಹಿರಿಯರು ಸಂಚರಿಸಬಹುದಾಗಿದೆ.

ಪ್ರತಿಭಟನೆ, 5 ಕ್ಕಿಂತ ಹೆಚ್ಚು ಜನರು ಗುಂಪು ಗೂಡುವುದು, ಘೋಷಣೆಗಳನ್ನು ಕೂಗುವುದನ್ನು, ಶಸ್ತ್ರಾಸ್ತ್ರ ಗಳ ಒಯ್ಯುವುದನ್ನು ನಿಷೇಧಿಸಲಾಗಿದೆ.

ನಿಷೇಧಾಜ್ಞೆ ಸರಕಾರದ ಆದೇಶದಂತೆ ನಡೆಯುವ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ.

ಜಿಲ್ಲಾ ವ್ಯಾಪ್ತಿಯಲ್ಲಿ ಕೆಲ ನಿರ್ಬಂಧಗಳ ಸಡಿಲಿಕೆ

Advertisement

ನಾಳೆ(ಆಗಸ್ಟ್ 5) ಯಿಂದ ಮುಂದಿನ 3 ದಿನಗಳವರೆಗೆ ಜಿಲ್ಲೆಯಾದ್ಯಂತ ನಿರ್ಬಂಧಗಳನ್ನು ಸಡಿಲಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಗುರುವಾರ ಆದೇಶ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಗೆ ಅಂಗಡಿಗಳನ್ನು ಮುಚ್ಚಲು ಅವಕಾಶ ನೀಡಲಾಗಿದೆ. ಮದ್ಯದಂಗಡಿಗಳನ್ನು ಆಗಸ್ಟ್ 05 ರಿಂದ ಸಂಜೆ 6 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಸಿಆರ್ ಪಿಸಿ 144 ಅಡಿಯಲ್ಲಿ ವಿಧಿಸಲಾದ ಇತರ ನಿರ್ಬಂಧಗಳು ಮೊದಲಿನಂತೆಯೇ ಮುಂದುವರೆಯಲಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :ಮಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ ಜಾರಿ; ಗಡಿಯಲ್ಲಿ 1 ವರ್ಷ ಚೆಕ್‌ಪೋಸ್ಟ್‌

Advertisement

Udayavani is now on Telegram. Click here to join our channel and stay updated with the latest news.

Next