ಹುಬ್ಬಳ್ಳಿ: ಹುಬ್ಬಳ್ಳಿ-ಅಂಕೋಲಾ ಹಾಗೂ ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲ್ವೆ ಮಾರ್ಗದ ಡಿಪಿಆರ್ (ವಿಸ್ತೃತ ಯೋಜನಾ ವರದಿ) ಜನವರಿ ಅಂತ್ಯದೊಳಗೆ ಪೂರ್ಣಗೊಳ್ಳಬೇಕು. ಜೂ.25ರೊಳಗೆ ಟೆಂಡರ್ ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದಕ್ಕಿರುವ ಸಣ್ಣಪುಟ್ಟ ತೊಂದರೆಗಳ ನಿವಾರಿಸಲಾಗುವುದು ಎಂದು ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ ತಿಳಿಸಿದರು.
Advertisement
ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆಗೆ ಸಂಬಂಧಿಸಿ ವನ್ಯಜೀವಿ ಮಂಡಳಿಯಿಂದ ವರದಿ ಬರಬೇಕಾಗಿದೆ. ಅರಣ್ಯ ಇಲಾಖೆ ಸೇರಿದಂತೆ ಇತರೆ ಇಲಾಖೆಯ ಅನುಮತಿ ದೊರೆತಿದೆ. ಇದೀಗ ವನ್ಯಜೀವಿಗಳ ಚಲನವಲನದ ಕುರಿತು ಒಂದು ಸಮೀಕ್ಷೆ ಆಗಿದೆ. ಅದರ ವರದಿ ಡಿ.15 ರೊಳಗೆ ಬರುವ ನಿರೀಕ್ಷೆಯಿದೆ. ಇದೊಂದು ವರದಿ ಬಂದರೆ ಯೋಜನೆ ಆರಂಭಿಸಲು ಯಾವುದೇ ಅಡೆತಡೆಗಳು ಇರುವುದಿಲ್ಲ ಎಂದು ತಿಳಿಸಿದರು.