Advertisement

‌Politics; ಭಾರತೀಯ ಜನತಾ ಪಕ್ಷ ಸೇರಿದ ಟೀಂ ಇಂಡಿಯಾ ಪ್ರಮುಖ ಕ್ರಿಕೆಟರ್

06:02 PM Sep 05, 2024 | Team Udayavani |

ವಡೋದರಾ: ಟೀಂ ಇಂಡಿಯಾದ ಪ್ರಮುಖ ಆಟಗಾರ, ಸ್ಟಾರ್‌ ಆಲ್‌ ರೌಂಡರ್‌ ರವೀಂದ್ರ ಜಡೇಜಾ (Ravindra Jadeja) ಅವರು ಇದೀಗ ರಾಜಕೀಯ ಪ್ರವೇಶ ಮಾಡಿದ್ದಾರೆ. ಜಡೇಜಾ ಅವರು ಇದೀಗ ಭಾರತೀಯ ಜನತಾ ಪಕ್ಷಕ್ಕೆ (BJP) ಸೇರ್ಪಡೆಯಾಗಿದ್ದಾರೆ.

Advertisement

ಬಿಜೆಪಿ ಶಾಸಕಿ ಮತ್ತು ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಹೊಸ ಸದಸ್ಯತ್ವದ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.

ರಿವಾಬಾ ಅವರು ತನ್ನ ಪೋಸ್ಟ್‌ನಲ್ಲಿ, ತಮ್ಮ ಬಿಜೆಪಿ ಸದಸ್ಯತ್ವ ಕಾರ್ಡ್‌ನೊಂದಿಗೆ, ಪತಿಯ ಸದಸ್ಯತ್ವದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಸೆಪ್ಟೆಂಬರ್ 2 ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮುಂದಾಳತ್ವದಲ್ಲಿ ಇದು ಆರಂಭವಾಗಿದೆ.

Advertisement

ರಿವಾಬಾ ಅವರು 2019 ರಲ್ಲಿ ಬಿಜೆಪಿಗೆ ಸೇರಿದ್ದರು. 2022 ರಲ್ಲಿ ಜಾಮ್‌ನಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷದಿಂದ ಕಣಕ್ಕಿಳಿದಿದ್ದರು. ಅವರು ಎಎಪಿ ಅಭ್ಯರ್ಥಿ ಕರ್ಶನ್‌ಭಾಯ್ ಕರ್ಮೂರ್ ಅವರನ್ನು ಸೋಲಿಸಿ ಕ್ಷೇತ್ರದಲ್ಲಿ ಶಾಸಕಿಯಾಗಿದ್ದಾರೆ.

35 ವರ್ಷದ ರವೀಂದ್ರ ಜಡೇಜಾ ಅವರು ಭಾರತದ ಏಕದಿನ ಮತ್ತು ಟೆಸ್ಟ್‌ ತಂಡದ ಪ್ರಮುಖ ಸದಸ್ಯರಾಗಿದ್ದಾರೆ. ಕಳೆದ ಟಿ20 ವಿಶ್ವಕಪ್‌ ಗೆಲುವಿನ ಬಳಿಕ ಅವರು ಟಿ20 ಮಾದರಿಗೆ ವಿದಾಯ ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next