Advertisement

ನೀತಿಸಂಹಿತೆ ಮಿತಿಯೊಳಗೆ ಪ್ರಚಾರ ಕಾರ್ಯ ನಡೆಸಿ

01:00 AM Mar 13, 2019 | Team Udayavani |

ಉಡುಪಿ: ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಪ್ರಚಾರ ಕಾರ್ಯ ನಡೆಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಸೂಚನೆ ನೀಡಿದ್ದಾರೆ.

Advertisement

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಸರಸ್ನೇಹಿ ಪ್ರಚಾರ ಮಾಡಿ
ಪ್ರಚಾರ ಕಾರ್ಯಕ್ಕೆ ಅಗತ್ಯವಿರುವ ಎಲ್ಲ ರೀತಿಯ ಅನುಮತಿಯನ್ನು ಜಿಲ್ಲಾಡಳಿತದಿಂದ ಮುಂಚಿತವಾಗಿ ಪಡೆದುಕೊಳ್ಳಬೇಕು ಎಂದು ಸೂಚಿಸಿದ ಜಿಲ್ಲಾಧಿಕಾರಿಯವರು ಪರಿಸರಸ್ನೇಹಿ ಪ್ರಚಾರ ಸಾಮಗ್ರಿ ಬಳಸುವಂತೆ ಮನವಿ ಮಾಡಿದರು.

ಶೀಘ್ರ ಅನುಮತಿ
ಸೂಕ್ತ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿದರೆ ನಿಗದಿತ ಸಮಯದಲ್ಲಿ ಅನುಮತಿ ದೊರೆಯಲು ಸಾಧ್ಯವಾಗಲಿದೆ. ಶೀಘ್ರ ಅನುಮತಿ ನೀಡಲು ಜಿಲ್ಲಾಡಳಿತ ವ್ಯವಸ್ಥೆ ಮಾಡಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಬಿ.ಜೆ.ಪಿ, ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಸಿಪಿಐಎಂ ಪಕ್ಷದ ಪ್ರತಿನಿಧಿಗಳು ಉಪಸ್ಥಿತರಿದ್ದರು.

Advertisement

ನಿಷ್ಪಕ್ಷಪಾತ ಕ್ರಮ
ಧಾರ್ಮಿಕ ಸ್ಥಳಗಳಲ್ಲಿಯೂ ನೀತಿ ಸಂಹಿತೆ ಉಲ್ಲಂಘನೆ ಮಾಡಬೇಡಿ. ಪ್ರಚಾರ ಕಾರ್ಯಕ್ಕಾಗಿ ಪೊಲೀಸ್‌ ಇಲಾಖೆಯಿಂದ ಅಗತ್ಯವಿರುವ ಎಲ್ಲ ಅನುಮತಿ ಶೀಘ್ರದಲ್ಲಿ  ನೀಡಲಾಗುತ್ತದೆ. ಪಕ್ಷಗಳ ನಡುವೆ ಘರ್ಷಣೆಗೆಳಿಗೆ ಅವಕಾಶ ನೀಡಬೇಡಿ. ನೀತಿ ಸಂಹಿತೆ ಉಲ್ಲಂಘನೆ ಕಂಡು ಬಂದಲ್ಲಿ ತಕ್ಷಣ ಮಾಹಿತಿ ನೀಡಿ. ತಪ್ಪಿತಸ್ಥರ ವಿರುದ್ದ ನಿಷ್ಪಕ್ಷಪಾತವಾಗಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
-ನಿಶಾ ಜೇಮ್ಸ್‌, ಎಸ್‌ಪಿ

Advertisement

Udayavani is now on Telegram. Click here to join our channel and stay updated with the latest news.

Next