Advertisement

ಮುಂಬಡ್ತಿ : ಸುಪ್ರೀಂಗೆ ಮೇಲ್ಮನವಿ

03:45 AM Mar 13, 2017 | Harsha Rao |

ಚಿತ್ರದುರ್ಗ: ಎಸ್ಸಿ, ಎಸ್ಟಿ ವರ್ಗಗಳ ನೌಕರರ ಮುಂಬಡ್ತಿ ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು
ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಎಚ್‌. ಆಂಜನೇಯ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್ಸಿ, ಎಸ್ಟಿ ಇತರೆ ಒಬಿಸಿ ಜಾತಿಗಳ ಮುಂಬಡ್ತಿ ಮೀಸಲಾತಿ
ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. ನ್ಯಾ. ಸದಾಶಿವ ಆಯೋಗದ ವರದಿಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದರು.

Advertisement

ನಂಜನಗೂಡು ಹಾಗೂ ಗುಂಡ್ಲುಪೇಟೆ ಕ್ಷೇತ್ರಗಳ ಉಪಚುನಾವಣೆಯ ನಂತರ ಏಪ್ರಿಲ್‌ನಲ್ಲಿ ಸಾಮಾಜಿಕ, ಶೈಕ್ಷಣಿಕ
ಹಾಗೂ ಆರ್ಥಿಕ ಸಮೀಕ್ಷೆ (ಜಾತಿ ಗಣತಿ) ವರದಿ ಪ್ರಕಟಿಸಲಾಗುವುದು. ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next