Advertisement

ಫಲಿತಾಂಶ ಸುಧಾರಿಸದಿದ್ದರೆ ಸೂಕ್ತ ಕ್ರಮ

11:47 AM Dec 03, 2018 | Team Udayavani |

ಬಸವಕಲ್ಯಾಣ: ಡಿಸೆಂಬರ್‌ ಒಳಗಡೆ ಎಸ್‌ ಎಸ್‌ಎಲ್‌ಸಿ ಪಠ್ಯಕ್ರಮ ಮುಗಿಸಿ, ಹೆಚ್ಚುವರಿ ತರಗತಿಗಳನ್ನು ತೆಗೆದುಕೊಂಡು ಫಲಿತಾಂಶದಲ್ಲಿ ಸುಧಾರಣೆ ತರಲು ಪ್ರಯತ್ನಿಸಬೇಕು ಎಂದು ಸಹಾಯಕ ಆಯುಕ್ತ ಜ್ಞಾನೇಂದ್ರಕುಮಾರ ಗಂಗವಾರ ಮುಖ್ಯಶಿಕ್ಷಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

ನಗರದ ತಾಲೂಕು ಪಂಚಾಯತ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿ ಮತ್ತು ಪ್ರೌಢ ಶಾಲಾ ಮುಖ್ಯಶಿಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಂದು ವೇಳೆ ಕಳೆದ ವರ್ಷದಂತೆ ಕಡಿಮೆ ಫಲಿತಾಂಶ ಬಂದಲ್ಲಿ ಅಂತಹ ಶಾಲೆಗಳ ವಿರುದ್ಧ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದರು.

ಸರಕಾರಿ ಶಾಲೆಗಳಲ್ಲಿ ಅತಿ ಹೆಚ್ಚು ವಿದ್ಯಾರ್ಥಿನಿಯರು ಪ್ರವೇಶ ಪಡೆದಿದ್ದಾರೆ. ಆದ್ದರಿಂದ ಗುಣಾತ್ಮಕ ಶಿಕ್ಷಣ ನೀಡುವುದು
ಪ್ರತಿಯೊಬ್ಬ ಶಿಕ್ಷಕರ ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಇದರಿಂದ ಭವಿಷ್ಯದಲ್ಲಿ ಅವರು ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ಎಂದರು.

ತಾಲೂಕಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಡೋಳಪ್ಪಾ ಪಿ.ಎಸ್‌. ಮಾತನಾಡಿ, ಪಠ್ಯಕ್ರಮ ಮುಗಿದ ನಂತರ ಪುನರಾವರ್ತನೆ ಮಾಡಬೇಕು. ಹಾಗೂ ವಿಷಯವಾರು ಶಿಕ್ಷಕರ ಕೊರತೆ ಇದ್ದಲ್ಲಿ ಗೌರವಧನದ ಮೇಲೆ ಶಿಕ್ಷರನ್ನು ತೆಗೆದುಕೊಳ್ಳಿ. ಅದಕ್ಕೆ ಬೇಕಾದ ಸಹಕಾರ, ಪ್ರೋತ್ಸಾಹ ನೀಡಲಾಗುವುದು ಎಂದು ಹೇಳಿದರು.

ತರಗತಿಯಲ್ಲಿ ಅತಿ ಹಿಂದುಳಿದ ವಿದ್ಯಾರ್ಥಿಗಳು ಉತ್ತಿರ್ಣರಾಗಬೇಕು ಎಂಬ ನಿಟ್ಟಿನಲ್ಲಿ ಧಾರವಾಡದ ಸಂಪನ್ಮೂಲ ವ್ಯಕ್ತಿಗಳು ತಯಾರಿಸಿದ ಪಾಸಿಂಗ್‌-30 ಪ್ಯಾಕೆಜ್‌ನ್ನು ತರಿಸಿ ಎಲ್ಲ ಶಾಲೆಗಳಿಗೆ ವಿತರಿಸಲು ನಿರ್ಧರಿಸಲಾಗಿದೆ. ಅದರ ಬಗ್ಗೆ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.

Advertisement

ಮಕ್ಕಳ ಹಿತದೃಷ್ಟಿಯಿಂದ ಸಹಾಯ ಮಾಡಲು ಸದಾ ಸಿದ್ದರಿದ್ದೇವೆ. ಆದರೆ ಅದಕ್ಕೆ ತಕ್ಕಂತೆ ಫಲಿತಾಂಶ ಬರುವುದು ತುಂಬಾ ಅವಶ್ಯಕವಾಗಿದೆ. ಒಂದು ವೇಳೆ ಉತ್ತಮವಾದ ಫಲಿತಾಂಶ ಬರದೆ ಇದ್ದಲ್ಲಿ ಅಂಥಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುಲಾಗುವುದು ಎಂದು ಹೇಳಿದರು. ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರು ಭಾಗವಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next