Advertisement

Property ನಗದೀಕರಣ ಪ್ರಸ್ತಾವನೆ ಸರಕಾರದ ಮುಂದಿಲ್ಲ: ಸಚಿವ

01:19 AM Jul 19, 2024 | Team Udayavani |

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯಕರವಾಗಿದ್ದು, ಸರಕಾರದ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಬಜೆಟ್‌ನಲ್ಲಿ ಅಗತ್ಯ ಅನುದಾನ ಒದಗಿಸಲಾಗಿದೆ.

Advertisement

ಜತೆಗೆ ಅಭಿವೃದ್ಧಿ ಯೋಜನೆಗಳು, ಕಾರ್ಯಕ್ರಮಗಳು ಮತ್ತು ಬಂಡವಾಳ ಕಾಮಗಾರಿಗಳನ್ನು ಕೂಡ ಅನುಷ್ಠಾನಗೊಳಿಸುತ್ತಿದ್ದು, ಎಲ್ಲದ್ದಕ್ಕೂ ಅಗತ್ಯ ಅನುದಾನ ಒದಗಿಸಲಾಗಿದೆ. ಹಾಗಾಗಿ ಸಂಪನ್ಮೂಲ ಕ್ರೋಡೀಕರಣಕ್ಕೆ ಆಸ್ತಿಗಳ ನಗದೀಕರಣ ಅಥವಾ ಬಂಡವಾಳ ಹಿಂದೆಗೆತದ ಪ್ರಸ್ತಾವನೆ ಇಲ್ಲ ಎಂದು ಸರಕಾರ ಹೇಳಿದೆ.

ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ, ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಬೊಕ್ಕಸ ಖಾಲಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆಡಳಿತ ಇಲಾಖೆಗಳು ಮತ್ತು ಈ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವ ನಿಗಮ, ಪ್ರಾಧಿಕಾರ ಮತ್ತು ಮಂಡಳಿಗಳ ಆಸ್ತಿಗಳನ್ನು ನಗದೀಕರಿಸಲು ಅಥವಾ ಮರುಬಳಕೆ ಮಾಡಲು ಕ್ರಮ ಕೈಗೊಂಡಿರುವುದು ನಿಜವೇ ಎಂದು ಕೇಳಿದ್ದಕ್ಕೆ ಸಿಎಂ ಪರವಾಗಿ ಉತ್ತರಿಸಿದ ಸಚಿವ ಬೋಸರಾಜ್‌, ಅಂತಹ ಯಾವುದೇ ಸಾಮಾನ್ಯ ಪ್ರಸ್ತಾವನೆ ಇರುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next