Advertisement

ಸದ್ಯಕ್ಕೆ ನೂಪುರ್‌ ಶರ್ಮಾ ಬಂಧನ ಬೇಡ: ಸುಪ್ರೀಂಕೋರ್ಟ್‌

09:53 PM Jul 19, 2022 | Team Udayavani |

ನವದೆಹಲಿ: ವಿವಾದಿತ ಹೇಳಿಕೆ ನೀಡಿದ ಆರೋಪಕ್ಕೆ ಗುರಿಯಾಗಿರುವ ಬಿಜೆಪಿಯ ಉಚ್ಚಾಟಿತ ವಕ್ತಾರೆ ನೂಪುರ್‌ ಶರ್ಮಾ ಅವರನ್ನು ಸದ್ಯಕ್ಕೆ ಬಂಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಮಂಗಳವಾರ ಆದೇಶ ನೀಡಿದೆ.

Advertisement

ನ್ಯಾ.ಸೂರ್ಯಕಾಂತ್‌ ಮತ್ತು ನ್ಯಾ.ಜೆ.ಬಿ.ಪರ್ದಿವಾಲಾ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ. ನೂಪುರ್‌ ದೇಶದ ಪ್ರತಿ ಕೋರ್ಟ್‌ಗೆ ಹಾಜರಾಗಿ ಎಫ್ಐಆರ್‌ ವಿರುದ್ಧ ಪರಿಹಾರ ಪಡೆದುಕೊಳ್ಳಬೇಕು ಎಂಬ ನಿಲುವನ್ನು ಕೋರ್ಟ್‌ ಹೊಂದಿಲ್ಲ ಎಂದು ನ್ಯಾಯಪೀಠ ತಿಳಿಸಿತು.

ನೂಪುರ್‌ ಶರ್ಮಾ ವಿರುದ್ಧ ದೆಹಲಿ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಎಫ್ಐಆರ್‌ ದಾಖಲಾಗಿದೆ. ಅವುಗಳನ್ನೆಲ್ಲ ನವದೆಹಲಿಗೆ ವರ್ಗಾಯಿಸಬೇಕು ಎಂದು ಕೋರಿಕೆ ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಮೂರು ರಾಜ್ಯ ಸರ್ಕಾರಗಳಿಗೆ ನೋಟಿಸ್‌ ಜಾರಿ ಮಾಡಿದ್ದು, ಆ.10ರ ಒಳಗಾಗಿ ಪ್ರತಿಕ್ರಿಯೆ ನೀಡಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ಜು.1ರಂದು ನ್ಯಾಯಪೀಠ ವಿವಾದಿತ ಹೇಳಿಕೆ ನೀಡಿದ್ದಕ್ಕಾಗಿ ನೂಪುರ್‌ ಶರ್ಮಾ ವಿರುದ್ಧ ಕಟುವಾಗಿ ಟೀಕಿಸಿತ್ತು.

ಹತ್ಯೆಗೆ ಸಂಚು?:
ಇನ್ನೊಂದೆಡೆ, ನೂಪುರ್‌ ಅವರ ಹತ್ಯೆ ನಡೆಸುವ ನಿಟ್ಟಿನಲ್ಲಿ ಪಾಕಿಸ್ತಾನದಿಂದ ವ್ಯಕ್ತಿ ದೇಶದೊಳಕ್ಕೆ ನುಸುಳಿದ್ದಾನೆ. ಕೆಲ ದಿನಗಳ ಹಿಂದೆ ಬಿಎಸ್‌ಎಫ್ ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಇರುವ ಗಡಿ ಪ್ರದೇಶದಲ್ಲಿ ಪಾಕಿಸ್ತಾನದ ಯುವಕನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ ಈ ಅಂಶ ದೃಢಪಟ್ಟಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next