Advertisement

Sagara:ಉಪವಿಭಾಗೀಯ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆ-ಬೇಳೂರು ಗೋಪಾಲಕೃಷ್ಣ 

04:07 PM Nov 17, 2023 | Pranav MS |

ಸಾಗರ: ಉಪವಿಭಾಗೀಯ ಆಸ್ಪತ್ರೆಯನ್ನು 250 ಹಾಸಿಗೆ ಸಾಮರ್ಥ್ಯಕ್ಕೆ ಮೇಲ್ದರ್ಜೆಗೆ ಏರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.
ಇಲ್ಲಿನ ಉಪವಿಭಾಗೀಯ ಆಸ್ಪತ್ರೆಯಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೊಡುಗೆಯಾಗಿ ನೀಡಲಾಗಿರುವ ಡಯಾಲಿಸಿಸ್ ಯಂತ್ರವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಿದ್ದರು.

Advertisement

ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ನುರಿತ ವೈದ್ಯ ಸಿಬ್ಬಂದಿಗಳ ತಂಡವಿದೆ. ಸಾಗರ ಮಾತ್ರವಲ್ಲದೆ ಅಕ್ಕಪಕ್ಕದ ಜಿಲ್ಲೆ, ತಾಲೂಕುಗಳಿಂದ ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದಾರೆ. ಇದನ್ನು ಮನಗಂಡು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಸರ್ಕಾರಕ್ಕೆ ಮತ್ತು ಆರೋಗ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದು ಇದಕ್ಕೆ ಪೂರಕವಾಗಿ ಸ್ಪಂದಿಸಿದ್ದಾರೆ. ಉಪವಿಭಾಗೀಯ ಆಸ್ಪತ್ರೆ ಮತ್ತು ತಾಯಿ ಮಗು ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಎರಡೂ ಆಸ್ಪತ್ರೆಗಳಲ್ಲಿ ವೈದ್ಯಸಿಬ್ಬಂದಿಗಳ ಕೊರತೆ ಇಲ್ಲ. ಅಗತ್ಯಕ್ಕಿಂತ ಹೆಚ್ಚಿನ ವೈದ್ಯರು ಇದ್ದು ಬರುವ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ನೀಡುತ್ತಿದ್ದಾರೆ. ಸದ್ಯ 9 ಡಯಾಲಿಸಿಸ್ ಯಂತ್ರವಿದ್ದು ಎಲ್ಲವೂ ಸೇವೆ ನೀಡುತ್ತಿದೆ. ಹೆಚ್ಚುವರಿಯಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಡಯಾಲಿಸಿಸ್ ಒಂದು ಯಂತ್ರವನ್ನು ಪೂರೈಕೆ ಮಾಡಲು ಮನವಿ ಸಲ್ಲಿಸಲಾಗಿತ್ತು. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಮತ್ತು ದಂಪತಿಗಳು ಡಯಾಲಿಸಿಸ್ ಯಂತ್ರ ಕೊಡುಗೆಯಾಗಿ ನೀಡುವ ಮೂಲಕ ಸಹಕಾರ ನೀಡಿದ್ದಾರೆ. ಅವರಿಗೆ ಕ್ಷೇತ್ರದ ಜನರ ಪರವಾಗಿ, ಆರೋಗ್ಯ ರಕ್ಷಾ ಸಮಿತಿ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಇದನ್ನೂ ಓದಿ: Sagara: ರೈತ ಸಂಘದವರಿಗೆ ಅಗೌರವ; ಗ್ರಾಮಾಂತರ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ

ನಾನು ಹಿಂದೆ ಶಾಸಕನಾಗಿದ್ದಾಗ ಮೊದಲ ಬಾರಿಗೆ ತಾಲೂಕು ಕೇಂದ್ರಕ್ಕೆ ಡಯಾಲಿಸಿಸ್ ಘಟಕ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೆ. ಇದೀಗ ಘಟಕವು ಉತ್ತಮವಾಗಿ ಕೆಲಸ ಮಾಡುತ್ತಿದೆ. ಘಟಕಕ್ಕೆ ಇನ್ನಷ್ಟು ಹೆಚ್ಚಿನ ಡಯಾಲಿಸಿಸ್ ಯಂತ್ರದ ಅಗತ್ಯವಿದ್ದು ದಾನಿಗಳು ಕೊಡುಗೆ ನೀಡಲು ಮನವಿ ಮಾಡಿದರು.

Advertisement

ಸಿವಿಲ್ ಸರ್ಜನ್ ಡಾ. ಬಿ.ಜಿ.ಸಂಗಮ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದುಗ್ಗೇಗೌಡ, ಶಾಂತಾ ನಾಯ್ಕ, ಸಹಾಯಕ ಆಯುಕ್ತೆ ಪಲ್ಲವಿ ಸಾತೇನಹಳ್ಳಿ, ಪ್ರಮುಖರಾದ ಗಣಪತಿ ಮಂಡಗಳಲೆ, ಮಧುಮಾಲತಿ, ಚೇತನರಾಜ್ ಕಣ್ಣೂರು, ಸೋಮಶೇಖರ ಲ್ಯಾವಿಗೆರೆ ಇನ್ನಿತರರು ಹಾಜರಿದ್ದರು. ಸುಲೋಚನಾ ಪ್ರಾರ್ಥಿಸಿದರು. ಗಿರೀಶ್ ವಂದಿಸಿದರು. ಪುಷ್ಪಾ ಪಿ.ಎಸ್. ನಿರೂಪಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next