Advertisement

ಮೇಲ್ಸೇತುವೆ ನಿರ್ಮಿಸಲು ಪ್ರಸ್ತಾವನೆ

03:46 PM Mar 03, 2021 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹಾದು ಹೋಗಲಿರುವ ರಾಷ್ಟ್ರೀಯಹೆದ್ದಾರಿಗಳಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವಾಹನ ಸವಾರರು ಮತ್ತು ಜನಸಾಮಾನ್ಯರಿಗೆ ಅನುಕೂಲ ಕೆಲವೊಂದೆಡೆಮೇಲ್ಸೇತುವೆಗಳನ್ನು ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು,ಮಂಜೂರಾತಿ ದೊರೆತ ತಕ್ಷಣ ಅನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

Advertisement

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ರಾಷ್ಟ್ರೀಯಹೆದ್ದಾರಿಗಳಲ್ಲಿ ರಸ್ತೆ ಸುರಕ್ಷತಾಕ್ರಮಗಳನ್ನು ಕೈಗೊಳ್ಳಲು ಹೊರವಲಯದ ಚದಲಪುರ ಸಹಿತಹಲವಡೆ ವಾಹನ ಸವಾರರು ಮತ್ತುಜನಸಾಮಾನ್ಯರ ಅನುಕೂಲಕ್ಕಾಗಿ ಮೇಲ್ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಂಜೂರಾತಿ ಬಳಿಕ ಕಾಮಗಾರಿ ಆರಂಭಿಸಲು ಕ್ರಮಕೈಗೊಳ್ಳಲಾಗುವುದು. ಅದಕ್ಕೂ ಮುನ್ನ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌ ಮಾತನಾಡಿ, ಜಿಲ್ಲೆಯಲ್ಲಿ ಕೆಲವೊಂದು ಕಡೆ ಅಪಘಾತ ವಲಯಗಳೆಂದುಗುರುತಿಸಲಾಗಿದ್ದು, ಅಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವ ಜೊತೆಗೆವಾಹನಗಳ ವೇಗ ನಿಯಂತ್ರಿಸಲು ವೈಜ್ಞಾನಿಕವಾಗಿ ರಸ್ತೆ ಉಬ್ಬುಗಳನ್ನು ನಿರ್ಮಿಸಲು ಮತ್ತು ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಆಗಬೇಕಾಗಿರುವಕೆಲಸಗಳ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಪ್ರಾದೇಶಿಕ ಸಾರಿಗೆಅಧಿಕಾರಿ ಎಚ್‌.ಡಿ.ಮಂಜುನಾಥ್‌,ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜು, ನಗರಸಭೆ ಆಯುಕ್ತ ಡಿ.ಲೋಹಿತ್‌ ಕುಮಾರ್‌ ಹಾಗೂ ರಾಷ್ಟ್ರೀಯ ಹೆದ್ದಾರಿಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next