Advertisement
ನಗರದ ವಿದ್ಯಾಮಂಗಲ ಕಾರ್ಯಲಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡ ಕಲಬುರಗಿ ವಿಭಾಗದ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಶಾಸಕ ಡಾ| ಎ.ಬಿ. ಮಾಲಕರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಭಾಷೆ, ನೆಲ, ಜಲ, ಸಂಪತ್ತಿನ ಬಗ್ಗೆ·ಅಭಿಮಾನ ಪ್ರತಿಯೊಬ್ಬರು ಬೆಳೆಸಿಕೊಂಡಾಗ ಕನ್ನಡ ಉಳಿಯಲಿದೆ. ಕನ್ನಡಕ್ಕೆ ತನ್ನದೆಯಾದ ಪರಂಪರೆ, ಹಿರಿಮೆ ಇದ್ದು, ಅನೇಕ ಮಹನಿಯರು ವಿವಿಧ ಸಾಧನೆಗೈದು ಕನ್ನಡ ಭಾಷೆಗೆ ಗೌರವ ತಂದಿದ್ದಾರೆ. ಈ ನಾಡಿನ ಮೂಲ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಇಂದಿನ ಮಕ್ಕಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
Related Articles
Advertisement
ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಶ್ರೀ ಗಂಗಾಧರ ಮಹಾಸ್ವಾಮೀಜಿ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಮರೆಡ್ಡಿ ತಂಗಡಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರತ್ನಾಕರ ಶೆಟ್ಟಿ, ಸಿ.ಎಫ್. ನಾಯ್ಕ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಜಿಪಂ ಸಿಇಒ ಡಾ| ಅವಿನಾಶ ಮೆನನ್ ರಾಜೇಂದ್ರನ್, ಯಾದಗಿರಿ ಜಿಲ್ಲಾ ಕನ್ನಡಸಾಹಿತ್ಯ ಪರಿಷತ್ತು ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ಹಿರಿಯ ಸಾಹಿತಿ ಜಗನಾಥ ಹೆಬ್ಟಾಳೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗುರುಲಿಂಗಪ್ಪ ಮಿಣಸಗಿ, ನಗರಸಭೆ ಪೌರಾಯುಕ್ತ ಸಂಗಪ್ಪ ಉಪಾಸೆ ಸೇರಿದಂತೆ ಇತರರು ಇದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ| ಕೆ. ಮುರಳಿಧರ ಸ್ವಾಗತಿಸಿ, ನಿರೂಪಿಸಿದರು
ಮಕ್ಕಳಿಗೆ ಕನ್ನಡ ಶಿಕ್ಷಣ ನೀಡಿ ಖಾಸಗಿ ಆಂಗ್ಲ ಮಾಧ್ಯಮ ಶಿಕ್ಷಣದಿಂದಾಗಿ ಈ ನೆಲದ ಮೂಲ ಕನ್ನಡ ತಾಯಿ ಭಾಷೆ ಸದ್ದಿಲ್ಲದೆ ಅಳಿವಿನಂಚಿಗೆ ತಲುಪುತ್ತಿದೆ. ಕನ್ನಡ ಭಾಷೆಯ·ಬಗ್ಗೆ ಅಭಿಮಾನ ಇರಬೇಕು, ಹೊರತಾಗಿ ತಾತ್ಸಾರ ಮನೋಭಾವನೆ ಬೇಡ. ಕನ್ನಡಕ್ಕೆ 8 ಜ್ಞಾನಪೀಠ ಪ್ರಶಸ್ತಿ ದೊರಕಿರುವುದು ಕನ್ನಡದ ಹಿರಿಮೆ-ಗರಿಮೆ ಹೆಚ್ಚಿಸಿದೆ. ಹೀಗಾಗಿ ಕನ್ನಡ ಮಾಧ್ಯಮದಲ್ಲಿಯೇ ಮಕ್ಕಳಿಗೆ ಶಿಕ್ಷಣ ಕೊಡಿಸುವಂತಹ ಕೆಲಸ ಪಾಲಕರು ಮಾಡಬೇಕು.ಪ್ರೊ| ಎಸ್.ಜಿ. ಸಿದ್ದರಾಮಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮೊದಲು ಕನ್ನಡ ಭಾಷೆ ಕಲಿಯಿರಿ ಇಂಗ್ಲಿಷ್ ಮಾಧ್ಯಮದಲ್ಲಿ ಕಲಿತರೆ ಮಾತ್ರ ಪರಿಣಿತರಾಗಬಹುದು ಎಂಬುದು ತಪ್ಪು,
ಭಾಷೆಯು ಪರಸ್ಪರ ಸಂಪರ್ಕದಿಂದ ಕಲಿಯಬಹುದಾಗಿದೆ. ಮೊದಲು ಕನ್ನಡ ತಾಯಿ ಭಾಷೆ ಕಲಿತವರಿಗೆ ಎಲ್ಲ ಭಾಷೆಯಲ್ಲಿಯೂ ಹಿಡಿತ ಸಾಧಿ ಸಬಹುದು.
ಡಾ| ಮೀನಾಕ್ಷಿ ಬಾಳಿ, ಹಿರಿಯ ಸಾಹಿತಿ