Advertisement
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆ ಬಳಿಕ ಡಾ.ಅಶ್ವತ್ಥನಾರಾಯಣ ಸುದ್ದಿಗಾರರ ಜತೆ ಮಾತನಾಡಿದರು.
Related Articles
Advertisement
ರೈತರ ಹಿತ ಕಾಯಲಾಗಿದೆ
“ಎಪಿಎಂಸಿ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ, ಎಪಿಎಂಸಿ ಕಮಿಟಿಗಳಿಗೂ ಧಕ್ಕೆ ಆಗಲ್ಲ. ಕೃಷಿ ಉತ್ಪನ್ನಗಳನ್ನು ರೈತರು ನೇರ ಮಾರಾಟ ಮಾಡಲು ಇದರಿಂದ ಅವಕಾಶ ದೊರೆಯಲಿದೆ. ರೈತರ ಆದಾಯ ದ್ವಿಗುಣಗೊಳಿಸುವ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು
ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ
“ಆಶಾ ಕಾರ್ಯಕರ್ತರನ್ನು ಉತ್ತೇಜಿಸುವ ಉದ್ದೇಶದಿಂದ ಸಹಕಾರ ಇಲಾಖೆ ಮೂಲಕ ಆಶಾ ಕಾರ್ಯಕರ್ತರಿಗೆ ಹೆಚ್ಚುವರಿ 3 ಸಾವಿರ ರೂ ಪ್ರೋತ್ಸಾಹ ಧನ ನೀಡಲಾಗುವುದು. ಇಂಥ ಅತ್ಯುತ್ತಮ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಭಿನಂದಿಸುತ್ತೇನೆ,”ಎಂದರು
ಇಬ್ರಾಹಿಂ ಬೇಡಿಕೆ ಸರಿಯಲ್ಲ
“ರಂಜಾನ್ ದಿನ ಸಾಮೂಹಿಕ ನಮಾಜ್ ಮಾಡಲು ಅವಕಾಶ ನೀಡಬೇಕು ಎಂಬ ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹಿಂ ಅವರ ಬೇಡಿಕೆ ಸರಿಯಲ್ಲ. ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಕೊಡಬಾರದು ಎಂದು ಸರ್ಕಾರ ನಿಶ್ಚಯಿಸಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಈ ರೀತಿ ಬೇಡಿಕೆ ಸಲ್ಲಿಸುವುದು ಸಮಂಜಸವಲ್ಲ. ಪರಿಸ್ಥಿತಿಯ ಲಾಭ ಪಡೆದು, ಭಾವನಾತ್ಮಕ ವಿಚಾರ ತಂದು ರಾಜಕೀಯ ಮಾಡುವುದು ಸರಿಯಲ್ಲ. ಜನರ ಆರೋಗ್ಯ ಗಮನದಲ್ಲಿಟ್ಟುಕೊಂಡು ಸೂಕ್ತ ಬೇಡಿಕೆ ಸಲ್ಲಿಸಲಿ”ಎಂದು ಹೇಳಿದರು.