Proposal: ಮಹಾನಗರ ಪಾಲಿಕೆ ಆಗಿ ಉಡುಪಿ ನಗರಸಭೆ: ಪ್ರಸ್ತಾವನೆಗೆ ಸೂಚನೆ
ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿಯಿಂದ ಜಿಲ್ಲಾಧಿಕಾರಿ, ಪೌರಾಯುಕ್ತರಿಗೆ ಪ್ರತ್ಯೇಕ ಪತ್ರ
Team Udayavani, Jan 16, 2025, 7:45 AM IST
ಬೆಂಗಳೂರು: ರಾಜ್ಯದ ಧಾರ್ಮಿಕ ಕೇಂದ್ರವಾದ ಉಡುಪಿ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲು ಸರಕಾರ ಮುಂದಾಗಿದ್ದು, ಈ ಸಂಬಂಧ ಪರಿಶೀಲನೆ ನಡೆಸಿ ಸೂಕ್ತ ಶಿಫಾರಸಿನೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ ಉಡುಪಿ ಜಿಲ್ಲಾಧಿಕಾರಿ ಮತ್ತು ಪೌರಾಯುಕ್ತರಿಗೆ ಸೂಚನೆ ನೀಡಿದೆ.
ಉಡುಪಿಯು ಸಾಂಸ್ಕೃತಿಕ, ಧಾರ್ಮಿಕ ಮತ್ತು ಆರ್ಥಿಕವಾಗಿ ಮಹತ್ವದ ಪ್ರದೇಶವಾಗಿದ್ದು, ಗಾಢವಾಗಿ ನಗರೀಕರಣದತ್ತ ಮತ್ತು ಸಾಕಷ್ಟು ಜನಸಂಖ್ಯೆ ಬೆಳವಣಿಗೆ ಆಗುತ್ತಿರುವ ನಗರವಾಗಿದೆ. ಅದಕ್ಕೆ ಪೂರಕವಾಗಿ ನಾಗರಿಕರಿಗೆ ಉತ್ತಮ ಆಡಳಿತ, ಹೆಚ್ಚಿನ ಮೂಲಸೌಕರ್ಯಗಳನ್ನು ಒದಗಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂಬ ಅಭಿ ಪ್ರಾಯ ಸರಕಾರ ಮಟ್ಟದಲ್ಲಿ ವ್ಯಕ್ತವಾಗಿದೆ. ಆದ್ದರಿಂದ ಇದಕ್ಕೆ ಸಂಬಂಧಿಸಿದಂತೆ ನಿಯಮಾನುಸಾರ ಪರಿಶೀಲಿಸಿ, ಅಗತ್ಯ ಪ್ರಸ್ತಾವನೆಯನ್ನು ಸೂಕ್ತ ಶಿಫಾರಸಿನೊಂದಿಗೆ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಈಚೆಗೆ ಜಿಲ್ಲಾಧಿಕಾರಿ ಮತ್ತು ಪೌರಾಯುಕ್ತರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.
ಕೆಪಿಸಿಸಿ ಸದಸ್ಯ ಮತ್ತು ಮಾಜಿ ಕಾರ್ಯದರ್ಶಿ ಎಸ್. ಮೋಹನ್‌ದಾಸ್ ಹೆಗಡೆ ಈ ಕುರಿತು ಪೌರಾಡಳಿತ ಸಚಿವ ರಹೀಂ ಖಾನ್ ಅವರ ಗಮನ ಸೆಳೆದಿದ್ದರು. ಅದಕ್ಕೆ ಪೂರಕವಾದ ದಾಖಲೆಗಳನ್ನೂ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ ಸಚಿವರು, ಈ ಸೂಚನೆ ನೀಡಿದ್ದಾರೆ. ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವುದರಿಂದ ಹೆಚ್ಚು ಹೂಡಿಕೆಗಳನ್ನು ಸೆಳೆಯಬಹುದು. ಉತ್ತಮ ಮೂಲಸೌಕರ್ಯ ಕಲ್ಪಿಸುವ ಮೂಲಕ ವ್ಯಾಪಾರೋದ್ಯಮಕ್ಕೆ ಪೂರಕವಾಗಲಿದೆ.
ಅಷ್ಟೇ ಅಲ್ಲ, ಪ್ರವಾಸಿ ಮೂಲಸೌಕರ್ಯ ಮತ್ತು ಸೇವೆಗಳ ಅಭಿವೃದ್ಧಿಯಿಂದ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಬಹುದು. ಒಟ್ಟಾರೆಯಾಗಿ ಕೈಗಾರಿಕೆ ಮತ್ತು ವಾಣಿಜ್ಯ ವೃದ್ಧಿಗೆ ಅನುಕೂಲವಾಗಲಿದೆ. ಮತ್ತಷ್ಟು ಉತ್ತಮ ಆಸ್ಪತ್ರೆಗಳು, ತುರ್ತು ಸೇವೆಗಳು, ಶಾಲಾ-ಕಾಲೇಜುಗಳು, ತರಬೇತಿ ಕೇಂದ್ರಗಳು, ಅದಕ್ಕೆ ಪೂರಕವಾಗಿ ಮತ್ತಿತರ ಸೌಕರ್ಯಗಳಿಂದ ಶಿಕ್ಷಣ, ಆರೋಗ್ಯ ವಲಯ ಅಭಿವೃದ್ಧಿ ಹೊಂದಲಿವೆ. ಆಡಳಿತ ಸುಧಾರಣೆ ದೃಷ್ಟಿಯಿಂದಲೂ ಮೇಲ್ದರ್ಜೆಗೇರಿಸುವುದು ಉತ್ತಮ ನಡೆ ಆಗಲಿದೆ ಎಂದು ಮೋಹನ್‌ದಾಸ್ ಹೆಗಡೆ ಮನವಿ ಮಾಡಿದ್ದಾರೆ.
ಮುಂದಿನ ಒಂದೆರಡು ವಾರಗಳಲ್ಲಿ ಜಿಲ್ಲಾಧಿಕಾರಿಯಿಂದ ಪ್ರಸ್ತಾವನೆ ಸಲ್ಲಿಕೆಯಾಗಲಿದೆ. ಅದನ್ನು ಪರಿಶೀಲಿಸಿ, ಸಚಿವರ ಗಮನಸೆಳೆಯಲಾಗುವುದು. ಅನಂತರ ಸಂಪುಟದಲ್ಲಿ ಅನುಮೋದನೆ ಪಡೆದು ತೀರ್ಮಾನ ಕೈಗೊಳ್ಳಲಾಗುತ್ತದೆ. ಇಡೀ ಪ್ರಕ್ರಿಯೆಗೆ ತುಸು ಸಮಯ ಹಿಡಿಯುತ್ತದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
ನಗರಸಭೆಯನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಪ್ರಸ್ತಾವನೆ ಸಲ್ಲಿಸಲು ಸೂಚನೆ ಬಂದಿದೆ. ಅತೀ ಶೀಘ್ರದಲ್ಲಿ ನಗರಸಭೆಯ ಸಾಮಾನ್ಯ ಸಭೆ ಕರೆದು ಪರಿಶೀಲಿಸಿ ನಗರಸಭೆ ವ್ಯಾಪ್ತಿಯ ಜನಸಂಖ್ಯೆ, ಯಾವ ಯಾವ ಗ್ರಾ. ಪಂ.ಗಳನ್ನು ಈ ವ್ಯಾಪ್ತಿಗೆ ಸೇರಿಸಿಕೊಳ್ಳಬಹುದು ಇತ್ಯಾದಿ ಅಂಶಗಳನ್ನು ಪರಿಶೀಲಿಸಿ ನಗರಸಭೆಯ ತೀರ್ಮಾನದ ಅನಂತರ ಕಳುಹಿಸಿಕೊಡಲಾಗುವುದು. -ಡಾ| ಕೆ. ವಿದ್ಯಾಕುಮಾರಿ, ಜಿಲ್ಲಾಧಿಕಾರಿ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire Incident: ಜಪ್ಪಿನಮೊಗರು, ಉಡುಪಿಯಲ್ಲಿ ಗೋದಾಮುಗಳು ಬೆಂಕಿಗಾಹುತಿ
Lecture Programme: ದೇಶ ಮತ್ತೊಮ್ಮೆ ವಿಭಜಿಸಲು ಅಸಾಧ್ಯ: ಪತ್ರಕರ್ತ ಶೇಖರ್ ಗುಪ್ತ
Udupi: ಹೆದ್ದಾರಿ ಅವ್ಯವಸ್ಥೆಯ ಪರಿಶೀಲಿಸಿದ ಬೆಂಗಳೂರು ಪ್ರಾದೇಶಿಕ ಅಧಿಕಾರಿ
Udupi: ಗೀತಾರ್ಥ ಚಿಂತನೆ 169: ಬಿಂಬವೂ ನಿತ್ಯ ಪ್ರತಿಬಿಂಬವೂ ನಿತ್ಯ
Kaup Hosa Marigudi: ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ
MUST WATCH
ಹೊಸ ಸೇರ್ಪಡೆ
BJP: ರಾಜ್ಯಾಧ್ಯಕ್ಷ ಚುನಾವಣೆ ಸ್ಪರ್ಧೆಗೆ ನಾನೂ ಸಿದ್ಧ: ಬಿ.ವೈ.ವಿಜಯೇಂದ್ರ ತಿರುಗೇಟು
Kotekar Robbery Case: ದರೋಡೆ ಯೋಜನೆಯ ಹಿಂದೆ ಒಬ್ಬನಲ್ಲ; ಇಬ್ಬರು ಸೂತ್ರಧಾರರು?
Horoscope: ಪರಿಹಾರವಿಲ್ಲದ ಸಮಸ್ಯೆ ಇಲ್ಲ ಎಂಬುದು ನೆನಪಿರಲಿ
India-China: ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಭಾರತ-ಚೀನಾ ಸಮ್ಮತಿ
Ullala: ಬಿದ್ದು ಸಿಕ್ಕಿದ್ದ 2.5 ಲ.ರೂ. ಮೌಲ್ಯದ ಚಿನ್ನಾಭರಣ ಮರಳಿಸಿದ ಯುವಕ!