Advertisement

ಪ್ರಚೋದನೆ ಮತ್ತು ಶಾಂತಿ ಕದಡುವವರ ವಿರುದ್ಧ ಕಾನೂನು ಕ್ರಮ: ಸಚಿವ ಮಧು ಬಂಗಾರಪ್ಪ

12:48 PM Oct 02, 2023 | Team Udayavani |

ಬೆಂಗಳೂರು: ಸಮಾಜದಲ್ಲಿ ಶಾಂತಿಯನ್ನು ಕದಡುವವರು ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು.

Advertisement

ಇಂದು ತಮ್ಮ ನಿವಾಸದಲ್ಲಿ ಶಿವಮೊಗ್ಗ ನಗರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಪ್ರಚೋದನಕಾರಿ ಹೇಳಿಕೆ ನೀಡುವವರಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಎಲ್ಲ ಮಾಹಿತಿ ತೆಗೆದುಕೊಂಡಿದ್ದೇನೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಅಧಿಕಾರಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದರು.

ಟಿಪ್ಪು ಭಾವಚಿತ್ರ ಪ್ರದರ್ಶನದಿಂದ ಘಟನೆವಾಗಿದೆ ಎಂದು ಹೇಳುತ್ತಿದ್ದಾರೆ. ಮನೆಗಳ ಮೇಲೆ ಕಲ್ಲು ತೂರಾಟವಾಗಿದೆ. ನಾನು ಜನಪ್ರತಿನಿಧಿಯಾಗಿ ನನ್ನ ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಕೆಲಸವಾಗುತ್ತಿದೆ. ಪ್ರಕರಣದ ತನಿಖೆಯನ್ನು ತನಿಖಾಧಿಕಾರಿಗಳು ಮಾಡುತ್ತಾರೆ. ಕಾನೂನು ಮೀರಿ ಹೋದವರ ಕ್ರಮ ಮಾಡುತ್ತೇವೆ. ಇಂತಹ ಘಟನೆಗಳಲ್ಲಿ ರಾಜಕೀಯ ಮಾಡಿ ಅವಕಾಶ ಮಾಡಿಕೊಳ್ಳುತ್ತಾರೆ. ಇದರಲ್ಲಿ ನಾನು ರಾಜಕೀಯ ಮಾಡುವುದಿಲ್ಲ ಎಂದರು.

ಇದನ್ನೂ ಓದಿ:Thalapathy 68: ದಳಪತಿ – ವೆಂಕಟ್‌ ಪ್ರಭು ಚಿತ್ರಕ್ಕೆ ಟಾಲಿವುಡ್‌ ಬೆಡಗಿ ನಾಯಕಿ?

Advertisement

ಸಮಾಜದಲ್ಲಿ ಕೆಟ್ಟವರನ್ನು ನಾವು ತಿದ್ದುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿಯವರ ಮೂರ್ತಿಯನ್ನು ದ್ವಂಸ ಮಾಡಿದ್ದರು. ಇಂತಹ ವಿಕೃತ ಮನಸ್ಸುಗಳ ತಲೆ ಹರಟೆ ಕೆಲಸಗಳನ್ನು ನಿಲ್ಲಿಸಬೇಕು. ಇದು ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಸಮಾಜದ ಜವಾಬ್ದಾರಿ ಕೂಡ ಇರುತ್ತದೆ. ಎಲ್ಲರೂ ಸೇರಿ ಶಾಂತಿ ನಿರ್ಮಾಣ ಮಾಡುವ ಕೆಲಸ ಮಾಡಬೇಕು ಎಂದರು.

ಜೆಡಿಎಸ್ ನಿಂದ ಕೆಲವರು ಪಕ್ಷಕ್ಕೆ ಬರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವರು, ಪಕ್ಷದ ಸಿದ್ಧಾಂತ ಒಪ್ಪಿ ಬರುವವರಿಗೆ ಬನ್ನಿ ಅಂತ ನಮ್ಮ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಹಾಗೂ ಹೈಕಮಾಂಡ್ ಹೇಳಿದೆ. ನಮ್ಮ ಹಿರಿಯರು ಅದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next