ಬಸವಕಲ್ಯಾಣ: ಭಾರತದಲ್ಲಿ ಜನರ ಅಭಿವೃದ್ಧಿ ಆಗಬೇಕಾದರೆ ಸಹಕಾರ ತತ್ವದಿಂದ ಮಾತ್ರ ಸಾಧ್ಯ ಎಂದು ಮಾಜಿ ಶಾಸಕ ಹಾಗೂ ಸಹಕಾರ ಭಾರತಿ ರಾಜ್ಯಾಧ್ಯಕ್ಷ ರಾಜಶೇಖರ ಶೀಲವಂತ ಹೇಳಿದರು. ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಹಕಾರ ಭಾರತಿ ಬೀದರ ವತಿಯಿಂದ ಆಯೋಜಿಸಿದ್ದ ಸಹಕಾರ ಭಾರತಿ ಸ್ಥಾಪನಾ ದಿನ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಆರ್ಥಿಕತೆಯಲ್ಲಿ ಸಹಕಾರಿ ಪಾಲು ದೊಡ್ಡ ಮಟ್ಟದಲ್ಲಿದೆ. ಅದನ್ನು ಮಗಂಡ ಕೇಂದ್ರ ಸರ್ಕಾರ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ ಸಹಕಾರಿಗಳಿಗೆ ಅವುಗಳ ಬೆಳವಣಿಗೆಗೆ ಅನುಕೂಲ ಮಾಡಿಕೊಟ್ಟಿದೆ. ಅದಕ್ಕೆ ಪ್ರಧಾನಿ ಮೋದಿ ಹಾಗೂ ಸಹಕಾರ ಸಚಿವ ಅಮಿತ್ ಶಾ ಅಭಿನಂದನಾರ್ಹರು ಎಂದರು.
ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಬಸವೇಶ್ವರ ಸುದ್ದಿ ಮಾಧ್ಯಮ ಮಹಾಮಂಡಳ ಅಧ್ಯಕ್ಷ ಗುರುನಾಥ ಜ್ಯಾಂತಿಕರ ಮಾತನಾಡಿ, ನಿರ್ಲಕ್ಷಿಸಲ್ಪಟ್ಟ ಸಹಕಾರ ಕ್ಷೇತ್ರ ಕೇಂದ್ರ ಸರ್ಕಾರ ಗುರುತಿಸಿ ಪ್ರತ್ಯೇಕ ಸಹಕಾರ ಸಚಿವಾಲಯ ಸ್ಥಾಪಿಸುವ ಮೂಲಕ ಸಹಕಾರಿಗಳನ್ನು ಗುರುತಿಸುವ ಕಾರ್ಯ ಮಾಡಿದೆ ಎಂದು ಹೇಳಿದರು.
ಜಿಲ್ಲಾಧ್ಯಕ್ಷ ವೀರಭದ್ರಪ್ಪ ಭುಯಾ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಜಗನ್ನಾಥ ಕರಂಜೆ ಪ್ರಾಸ್ತಾವಿಕ ಮಾತನಾಡಿದರು. ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಬಸಪ್ಪ ಚನ್ನಮಲ್ಲೆ, ಜಿಲ್ಲಾ ಪ್ರಮುಖ ಸಂಜಯ ಕ್ಯಾಸಾ, ರಾಜ್ಯ ಸಂಘಟನಾ ಪ್ರಮುಖ ಮಂಜುನಾಥ, ತಾಲೂಕು ಅಧ್ಯಕ್ಷ ಶ್ರೀಕಾಂತ ಸ್ವಾಮಿ ಸೋಲಪುರ, ಬಸವರಾಜ ಬುಧೇರಾ, ಹಿರಿಯ ಸಹಕಾರಿಗಳಾದ ಸೂರ್ಯಕಾಂತ ಮಠಪತಿ, ಬಂಡುರಾವ್ ಕುಲಕರ್ಣಿ, ಸಿಇಒ ಅಮೃತ ಹೊಸಮನಿ, ಜಿಲ್ಲಾ ಸಂಯೋಜಕ ವೀರಶಟ್ಟಿ ಕಾಮಣ್ಣಾ ಇತರರಿದ್ದರು.