Advertisement

Manipal: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ

10:10 PM Aug 03, 2024 | Team Udayavani |

ಮಣಿಪಾಲ: 80 ಬಡಗಬೆಟ್ಟು ಗ್ರಾಮದ ಖಾಸಗಿ ಲಾಡ್ಜ್ ಒಂದರಲ್ಲಿ ಅಕ್ರಮ, ಲಾಭಕ್ಕಾಗಿ ಬಲವಂತವಾಗಿ ಮಹಿಳೆಯನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಮಣಿಪಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದು, ರೂಮ್‌ನಲ್ಲಿದ್ದ ಪಶ್ಚಿಮ ಬಂಗಾಲ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಸಂತ್ರಸ್ತ ಯುವತಿಯನ್ನು ರಕ್ಷಿಸಲಾಗಿದೆ. ಈಕೆಯಿಂದ ಕೃತ್ಯದ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಸಂತ್ರಸ್ತೆ ನೀಡಿರುವ ಮಾಹಿತಿಯಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next