Advertisement

ಗಾಯಗೊಂಡವರ ಜೀವ ರಕ್ಷಿಸಿ

07:18 AM Mar 21, 2019 | Team Udayavani |

ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುವಿಗೆ ಖಾಸಗಿ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಮಾಡದೆ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸ ಬೇಕು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಪಿ.ಹರಿಶೇಖರನ್‌ ಮನವಿ ಮಾಡಿದರು.

Advertisement

ನಗರ ಸಂಚಾರ ಪೊಲೀಸ್‌ ವಿಭಾಗ ಮತ್ತು ಸಾಗರ್‌ ಆಸ್ಪತ್ರೆ ಸಹಭಾಗಿತ್ವದಲ್ಲಿ ಬುಧವಾರ ನಗರದ ಸಂಚಾರ ನಿರ್ವಾಹಣ ಕೇಂದ್ರದಲ್ಲಿ ಆಯೋಜಿಸಿದ್ದ ‘ ವಿಶ್ವ ತಲೆ ಗಾಯ ದಿನ (ಹೆಡ್‌ ಇಂಜುರಿ ಡೇ) ಕಾರ್ಯಕ್ರಮದಲ್ಲಿ ಮಾತನಾಡಿದರು.

ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಕೆಲ ಆಸ್ಪತ್ರೆ ಸಿಬ್ಬಂದಿ ಪ್ರಥಮ ಚಿಕಿತ್ಸೆ ನೀಡದೆ, ಅನಗತ್ಯ ಪ್ರಶ್ನೆಗಳನ್ನು ಕೇಳುತ್ತ ನಿರ್ಲಕ್ಷ್ಯ ಮಾಡುತ್ತಿರುವ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಹೀಗಾಗಿ ಖಾಸಗಿ ಆಸ್ಪತ್ರೆ ಸಿಬ್ಬಂದಿ ಮೊದಲು ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಪ್ರದರ್ಶಿಸಬೇಕು ಎಂದರು. 

ಈ ನಿಟ್ಟಿನಲ್ಲಿ ನಗರದ ಎಲ್ಲ ಖಾಸಗಿ ಆಸ್ಪತ್ರೆಗಳ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಮತ್ತು ಆ್ಯಂಬುಲೆನ್ಸ್‌ ನಿರ್ವಾಹಣ
ಸಂಸ್ಥೆಗಳ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರ ನಡುವೆ ಆಪ್ತ ಸಮಾಲೋಚನಾ ಸಭೆಯನ್ನು ಸದ್ಯದಲ್ಲೇ ಆಯೋಜಿಸಲಾಗುವುದು ಎಂದು ಹೇಳಿದರು.

ಸುರಕ್ಷತಾ ನಿಯಮಗಳನ್ನು ಅನುಸರಿಸದೆ ದೇಶದಲ್ಲಿ ಲಕ್ಷಾಂತರ ಜನರು ರಸ್ತೆ ಅಪಘಾತದಲ್ಲಿ ಮೃತಪಡುತ್ತಿದ್ದಾರೆ. ರಸ್ತೆ ಅಪಘಾತಗಳ ಬಗ್ಗೆ ಮಾಹಿತಿಯಿದ್ದರೂ ಅನೇಕ ಮಂದಿ ಹೆಲ್ಮೆಟ್‌ ಧರಿಸದೆ ವಾಹನ ಚಲಾಯಿಸುತ್ತಾರೆ. ಹೆಲ್ಮೆಟ್‌ ಪಟ್ಟಿಯನ್ನು  ಬಿಗಿಗೊಳಿಸಿಕೊಳ್ಳುವುದಿಲ್ಲ. ಕಾರು ಚಲಾಯಿಸುವಾಗ ಸೀಟ್‌ ಬೆಲ್ಟ್ಹಾ ಕಿಕೊಳ್ಳುವುದಿಲ್ಲ. ಹೀಗಾಗಿ ಪ್ರತಿ ಯೊಬ್ಬ ವಾಹನ ಸವಾರರು ಎಚ್ಚರಿಕೆ ಯಿಂದ ವಾಹನ ಚಲಾವಣೆ ಮಾಡಬೇಕೆಂದು ಮನವಿ ಮಾಡಿದರು.

Advertisement

ಸಾಗರ್‌ ಆಸ್ಪತ್ರೆ ಪ್ರತಿವರ್ಷ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಆಸ್ಪತ್ರೆಗಳು ಹೆಚ್ಚು ಹೆಚ್ಚು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ಸಾಗರ್‌ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಜಗದೀಶ್‌ ಚಂದ್ರ ಮಾತನಾಡಿ, ಸಾಗರ್‌ ಆಸ್ಪತ್ರೆ ಬಹಳ ವರ್ಷಗಳಿಂದ ಸಮಾಜಮುಖೀ ಕಾರ್ಯಗಳಲ್ಲಿ ತೊಡಗಿದೆ. ಮುಂದೆಯೂ ಅದು ಮುಂದುವರಿಯಲಿದೆ. ಹಾಗೆಯೇ ವಾಹನ ಸವಾರರು ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ಸಂಚಾರ ವಿಭಾಗದ ಪೊಲೀಸರಿಗೆ ಹೆಲ್ಮೆಟ್‌ ವಿತರಣೆ ಮಾಡಲಾಯಿತು. ಪೂರ್ವ ಸಂಚಾರ ವಿಭಾಗದ ಡಿಸಿಪಿ ಡಾ. ಕೆ.ವಿ. ಜಗದೀಶ್‌, ಉತ್ತರ ವಿಭಾಗದ ಡಿಸಿಪಿ ಸಾರಾ ಫಾತಿಮಾ, ಪಶ್ಚಿಮ ವಿಭಾಗದ ಡಿಸಿಪಿ ಡಾ.ಸೌಮ್ಯಲತಾ, ಸಾಗರ್‌ ಆಸ್ಪತ್ರೆ ವೈದ್ಯ ಡಾ. ಎಸ್‌. ಮುರುಳಿ ಮೋಹನ್‌ ಇತರರು ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next