ಉಡುಪಿ: ಶ್ರೀಕೃಷ್ಣ ಮಠದ ಪರಿಸರದಲ್ಲಿ ಎರಡು ಕಾಲುಗಳು ಸ್ವಾಧೀನವಿಲ್ಲದೆ ನಡೆದಾಡಲು ಸಾಧ್ಯವಿಲ್ಲದೆ ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ನಾಗರಿಕ ಸಮಿತಿಯ ಸಂಚಾಲಕರಾದ ನಿತ್ಯಾನಂದ ಒಳಕಾಡು ಅವರು ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಅರುಣ್ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
Advertisement
ಈ ವ್ಯಕ್ತಿಯು ಐದಾರು ದಿನಗಳಿಂದ ಆಹಾರವಿಲ್ಲದೆ ಅಸಹಾಯಕ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ. ವ್ಯಕ್ತಿಯ ಹೆಸರು ಹಾಗೂ ವಿಳಾಸ ತಿಳಿದು ಬಂದಿಲ್ಲ. ಸಂಬಂಧಪಟ್ಟವರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬಹುದು.