Advertisement

ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ, ಭೂ ಕಂದಾಯ ವಿಧೇಯಕ ಅಂಗೀಕಾರ

08:50 PM Sep 19, 2022 | Team Udayavani |

ವಿಧಾನ ಪರಿಷತ್‌: ವಿಧಾನಸಭೆಯಲ್ಲಿ ಅಂಗೀಕಾರವಾಗಿರುವ “ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕ-2022′ ಹಾಗೂ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ-2022ಕ್ಕೆ ಸೋಮವಾರ ಮೇಲ್ಮನೆ ಕೂಡ ಅಂಗೀಕರಿಸಿತು.

Advertisement

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ವಿಧೇಯಕವನ್ನು ಪ್ರಸ್ತಾಪಿಸಿದರು. ಈ ಕಾಯ್ದೆ ಅಡಿ ದೂರು ದಾಖಲಾದರೆ, ಇನ್ಮುಂದೆ ಹಣಕಾಸು ಸಂಸ್ಥೆಗಳ ಮುಖ್ಯಸ್ಥರು, ನಿರ್ದೇಶಕರ ವಿರುದ್ಧದ ಪ್ರಕರಣಗಳಲ್ಲಿನ ಅಪರಾಧವು ಜಾಮೀನುರಹಿತ ಎಂದು ಪರಿಗಣಿಸಲಾಗುತ್ತದೆ. ಅಷ್ಟೇ ಅಲ್ಲ, ಒಂದು ಹಣಕಾಸು ಸಂಸ್ಥೆಯ ವಿರುದ್ಧ ಹಲವು ಕಡೆ ಎಫ್‌ಐಆರ್‌ಗಳು ದಾಖಲಾಗಿದ್ದರೆ, ಅದನ್ನು ಒಂದೇ ಪ್ರಕರಣವಾಗಿ ವಿಲೀನಗೊಳಿಸಲು ಅವಕಾಶ ಮಾಡಿಕೊಡಲಾಗಿದೆ.

ಈ ಪ್ರಕರಣಗಳ ವಿರುದ್ಧ ಸಾಮಾನ್ಯ ತನಿಖೆ ಕೈಗೊಳ್ಳಲು ಆದೇಶಿಸಬಹುದು. ಇದಕ್ಕಾಗಿ ಒಬ್ಬ ಅಧಿ ಕಾರಿಯನ್ನು ನೇಮಕ ಮಾಡುವ ಅಧಿ ಕಾರವನ್ನು ಸರ್ಕಾರಕ್ಕೆ ನೀಡಬಹುದು ಎಂದು ತಿದ್ದುಪಡಿ ವಿಧೇಯಕದಲ್ಲಿ ಉಲ್ಲೇಖೀಸಲಾಗಿದೆ. ಜತೆಗೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್‌ ಸಮ್ಮತಿಯೊಂದಿಗೆ ವಿಶೇಷ ನ್ಯಾಯಾಲಯ ಕೂಡ ಸ್ಥಾಪಿಸಬಹುದಾಗಿದೆ.

ಮುಖ್ಯವಾಗಿ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ ಸೇರಿ ಹಣಕಾಸು ಸಂಸ್ಥೆಗಳ ವಂಚನೆಗಳಿಂದ ಠೇವಣಿದಾರರನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಹಣಕಾಸು ಸಂಸ್ಥೆಗಳಿಗೆ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next