Advertisement

ಧಾರ್ಮಿಕ ಕಟ್ಟಡ ಮಸೂದೆ ಅಂಗೀಕಾರ

10:58 PM Sep 24, 2021 | Team Udayavani |

ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಧಾರ್ಮಿಕ ಕಟ್ಟಡಗಳ(ಸಂರಕ್ಷಣೆ) ಮಸೂದೆ-2021ಅನ್ನು ಸದನ ಅನುಮೋದಿಸಿದೆ.

Advertisement

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಸೂದೆ ಮಂಡಿಸಿ, ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ಸಂರಕ್ಷಿಸಲು ಈ ಮಸೂದೆ ತಂದಿದ್ದೇವೆ. ಪ್ರಕರಣವು ಸುಪ್ರೀಂ ಕೋರ್ಟ್‌ನಲ್ಲಿ ಇರುವುದರಿಂದ ಈ ರೀತಿ ನಿರ್ಮಾಣವಾಗಿರುವ ಯಾವುದೇ ಧಾರ್ಮಿಕ ಕಟ್ಟಡವನ್ನು ಸಕ್ರಮ ಮಾಡುವುದಿಲ್ಲ. ನ್ಯಾಯಾಲಯದ ಅಂತಿಮ ಆದೇಶದವರೆಗೂ ಅವುಗಳನ್ನು ರಕ್ಷಿಸಲು ಮತ್ತು ಸದ್ಯ ಉದ್ಭವಿಸಿರುವ ಗೊಂದಲ ನಿವಾರಣೆಗೆ ಮಸೂದೆ ತಂದಿದ್ದೇವೆ. ಇದರಿಂದ ಯಾರಿಗೂ ಸಮಸ್ಯೆ ಆಗುವುದಿಲ್ಲ ಎಂದರು.

ಯಾವುದೇ ಧಾರ್ಮಿಕ ಕಟ್ಟಡವನ್ನು ಸಕ್ರಮ ಮಾಡುವುದಿಲ್ಲ.  ಅಧಿಕಾರಿಗಳು ನ್ಯಾಯಾಲಯ ಆದೇಶ ತೋರಿಸಿ, ನೆಲಸಮ ಮಾಡುವುದನ್ನು ತಾತ್ಕಾಲಿಕವಾಗಿ ಸುಪ್ರೀಂ ಕೋರ್ಟ್‌ನ ಅಂತಿಮ ಆದೇಶವರೆಗೂ ತಡೆಯುವ ಕಾರ್ಯ ಮಾಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು. ಅನಂತರ ಆಡಳಿತ ಪಕ್ಷ ಹಾಗೂ ವಿಪಕ್ಷದ ಸದಸ್ಯರ ಒಪ್ಪಿಗೆಯಂತೆ  ಮಸೂದೆ ಅಂಗೀಕಾರಗೊಂಡಿತು.

Advertisement

Udayavani is now on Telegram. Click here to join our channel and stay updated with the latest news.

Next