Advertisement

ಬೆಳಗಾವಿಯಲ್ಲಿ ಪ್ರವಾಹ : ಮಾರ್ಕಂಡೇಯ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ

11:49 AM Jul 23, 2021 | Girisha |

ಬೆಳಗಾವಿ : ಭಾರೀ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ಹಗ್ಗ ಎಸೆದು ರಕ್ಷಿಸಿರುವ ಘಟನೆ ತಾಲೂಕಿನ ವಾಘವಡೆ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

Advertisement

ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದ ಭರಮಾ ಪಾಟೀಲ ಎಂಬ ವ್ಯಕ್ತಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮಾರ್ಕಂಡೇಯ ನದಿಯಲ್ಲಿ ಯುವ ಕೊಚ್ಚಿ ಹೋಗುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಯುವಕನನ್ನು ರಕ್ಷಿಸಿದ್ದಾರೆ.

ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆಯಿಂದಾಗಿ ಪ್ರವಾಹ ಭೀತಿ ಉಂಟಾಗಿದ್ದು, ಮಾರ್ಕಂಡೇಯ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next