Advertisement

ಇಬ್ಬರು ಬಾಲ ಕಾರ್ಮಿಕರ ರಕ್ಷಣೆ

05:56 PM Mar 22, 2022 | Shwetha M |

ವಿಜಯಪುರ: ಜಿಲ್ಲೆಯ ಕಾರ್ಮಿಕ ಇಲಾಖೆ ಅಧಿಕಾರಿಗಳು ಸಿಂದಗಿ ಪಟ್ಟಣದಲ್ಲಿ ಅನೀರಿಕ್ಷಿತ ದಾಳಿ ನಡೆಸಿ ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೇ ಪಟ್ಟಣದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಬಾಲ ಕಾರ್ಮಿಕ ನಿರ್ಮೂಲನೆ ಕಾನೂನಿನ ಕರಪತ್ರ ಹಂಚಿ ಜನರಲ್ಲಿ ಜಾಗೃತಿ ಮೂಡಿಸಿದರು.

Advertisement

ಸಿಂದಗಿ ವೃತ್ತದ ಕಾರ್ಮಿಕ ನಿರೀಕ್ಷಕಿ ಜಗದೇವಿ ಸಜ್ಜನ ಮಾತನಾಡಿ, ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಓರ್ವ ವ್ಯಕ್ತಿ, ಸರ್ಕಾರದ ಒಂದು ಇಲಾಖೆ ಶ್ರಮಿಸಿದರೆ ಸಾಲದು. ಬದಲಾಗಿ ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಸರ್ಕಾರದ ಎಲ್ಲ ಇಲಾಖೆಗಳು ಹಾಗೂ ಸಮಾಜದಲ್ಲಿರುವ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಿಂದಗಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರುದ್ರಗೌಡ ಪಾಟೀಲ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿ ಕಾರಿ ಸತೀಶ ಗೂಡರು, ಶಿಕ್ಷಣ ಇಲಾಖೆ ಅಧಿಕಾರಿ ಎಚ್‌.ಎಂ. ಬಡಿಗೇರ, ರೇಷ್ಮೆ ಇಲಾಖೆ ಅಧಿಕಾರಿ ಎಸ್‌.ಎಸ್‌. ಲಮಾಣಿ, ಪೊಲೀಸ್‌ ಅಧಿಕಾರಿ ಎ.ಕೆ. ಮಲಭಾಗಿ, ಆರ್‌.ಬಿ. ರಾಂಪುರ, ಎಸ್‌. ಎನ್‌. ಕಾರವಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ನೀಲಮ್ಮ ಖೇಡಗಿ, ಪಾರ್ವತಿ ಶಿವನಾಳ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next