ಮಲ್ಪೆ: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಾಣಿಜ್ಯ ಸಂಘ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ಸೆ. 5ರಂದು ಫಿಟ್ ಇಂಡಿಯಾ ಉಪನ್ಯಾಸ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದ ಕೆಎಂಸಿ ಬಯೋ ಕೆಮಿಸ್ಟ್ರಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಶಿವಾನಂದ ನಾಯಕ್ ಅವರು ಮಾತನಾಡಿ,ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಪ್ರೋಟೀನ್‌ಯುಕ್ತ ಆಹಾರವನ್ನು ಹೆಚ್ಚಾಗಿ ಬಳಸಬೇಕು, ಆರೋಗ್ಯಕ್ಕೆ ಹಾನಿಕರವಾದ ಕರಿದ ಆಹಾರ ಪದಾರ್ಥಗಳನ್ನು ಹಾಗೂ ಮಾರಕ ಪಾನೀಯಗಳ ಸೇವನೆಯನ್ನು ತ್ಯಜಿಸುವುದು ಉತ್ತಮ ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ| ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಆರೋಗ್ಯವನ್ನು ಕಾಪಾಡಲು ದೈನಂದಿನ ವ್ಯಾಯಾಮ ಹಾಗೂ ಆಹಾರ ಪದ್ಧತಿಗಳನ್ನು ಅಳವಡಿಸಿಕೊಳ್ಳುವಂತೆ ಸೂಚಿಸಿದರು.
ಇತಿಹಾಸ ವಿಭಾಗ ಮುಖ್ಯಸ್ಥರು ಮತ್ತು ಐಕ್ಯೂಎಸಿ ಸಂಚಾಲಕ ಡಾ| ಸುರೇಶ್ ರೈ ಕೆ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗ ಮುಖ್ಯಸ್ಥ ಪ್ರೊ| ಉದಯ ಶೆಟ್ಟಿ ಕೆ.ಸ್ವಾಗತಿಸಿದರು.
ವಾಣಿಜ್ಯ ಸಂಘದ ಸಂಚಾಲಕ ಪ್ರೊ|ಉಮೇಶ್ ಪೈ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.