ರಾಮನಗರ: ರೈತ ವಿರೋಧಿ ಕಾಯ್ದೆ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ರೈತ ಸಂಘಟನೆಯ ವಿವಿಧ ಬಣಗಳು ನಗರದ ಎಪಿಎಂಸಿ ವೃತ್ತದಲ್ಲಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು 3 ಗಂಟೆ ತಡೆದು ಪ್ರತಿಭಟಿಸಿದರು.
ಎಪಿ ಎಂಸಿ ಕಾಯ್ದೆ ಸೇರಿದಂತೆ ರೈತ ವಿರೋಧಿ ಕಾಯ್ದೆಗೆ ಕೇಂದ್ರ ಸರ್ಕಾರ ತಂದಿರುವ ತಿದ್ದುಪಡಿ ರೈತ ರಿಗೆ ಮಾರಕವಾಗಿವೆ. ಶೀಘ್ರ ಕಾಯ್ದೆ ರದ್ದುಗೊಳಿಸಿ ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕೆಂದು ಪ್ರತಿ ಭಟನಾನಿರತ ರೈತರು ಕೇಂದ್ರಕ್ಕೆ ಆಗ್ರಹಿಸಿದರು.
ದೇಶದ ವಿವಿಧ ರೈತ ಸಂಘಟನೆ ಹೋರಾಟಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ರೈತ ಸಂಘಟ ನೆಗಳು “ಸಂಯುಕ್ತ ಕರ್ನಾಟಕ ಒಕ್ಕೂಟ ವೇದಿಕೆ’ಯಡಿ ಪ್ರತಿಭಟನೆ ಹಮ್ಮಿಕೊಂಡಿದ್ದವು. ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ದೆಹಲಿಯಲ್ಲಿ ನಿರಂತರ ಹೋರಾಟ ನಡೆಯುತ್ತಿದೆ. ಇದನ್ನು ಹತ್ತಿಕ್ಕುವ ಹುನ್ನಾರಗಳೂ ನಡೆದಿವೆ. ಇದರಲ್ಲಿ ಕಾಣದ ಕೈಗಳ ಕೈವಾಡವಿದೆ ಇದು ರೈತಸಾಗರದ ಮುಂದೆ ನಡೆಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ವಿರೋಧಿ ಧೋರಣೆ: ಪ್ರಧಾನಿ ಮೋದಿ, ಕೃಷಿ ಸಚಿವ ತೋಮರ್ ಸೇರಿದಂತೆ ಬಿಜೆಪಿ ಸರ್ಕಾರ “ಕೃಷಿ ಭೂಮಿಗೆ ಸಂಬಂಧಿಸಿದಂತೆ ಕಾಯ್ದೆ ತಿದ್ದುಪಡಿಯಿಂದ ಕಾರ್ಪೊರೇಟ್ ಕಂಪನಿಗಳಿಗೆ ಸಹಾಯವಾಗುತ್ತಿದೆ. ಬಂಡವಾಳಶಾಹಿಗಳಿಗೆ ಕೇಂದ್ರ ಮಣೆ ಹಾಕಿದೆ. ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ರೈತ ವಿರೋಧಿಯಾಗಿದೆ ಎಂದು ರೈತ ಮುಖಂಡರು ಕಿಡಿಕಾರಿದರು.
ಇದನ್ನೂ ಓದಿ :ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ
ಬಿಡದಿಯಲ್ಲಿ ರೈತ ಸಂಘದಿಂದ ರಸ್ತೆ ತಡೆ ನಡೆಸಲಾಯಿತು.ಸಂಘಟನೆಯ ಜಿಲ್ಲಾಧ್ಯಕ್ಷ ಪಿ ಎಂ. ರವಿ ನೇತೃತ್ವ ವಹಿಸಿದ್ದರು. ರೈತ ಸಂಘದ ಉಪಾಧ್ಯಕ್ಷ ಎಂ. ರಾಮು, ಜಿಲ್ಲಾ ಧ್ಯಕ್ಷ ಮಲ್ಲಯ್ಲ, ರೈತ ಮಹಿಳಾ ಸಂಘದ ಉಪಾ ಧ್ಯಕ್ಷೆ ಅನಸೂಯಮ್ಮ, ರೈತ ಸಂಘದ ಅಧ್ಯಕ್ಷ ತುಂಬೇನಹಳ್ಳಿ ಶಿವಕುಮಾರ್, ಎಂ.ಡಿ. ಶಿವಕುಮಾರ್, ಸುಜೀವನ್‌ಕುಮಾರ್, ಅರುಣ್, ಶ್ರೀನಿವಾಸ, ವಿವಿಧ ಸಂಘಟನೆ ಮುಖಂಡರು ಹಾಜರಿದ್ದರು.