ಮಂಡ್ಯ: ಕಳೆದ ಏಳು ದಿನಗಳಿಂದ ಕೆಲಸದಿಂದ ಹೊರಗುಳಿದು ಮನೆಯಲ್ಲಿಯೇ ಇದ್ದುಕೊಂಡು ಪ್ರತಿಭಟನೆ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಆರೋಗ್ಯಮತ್ತುಕುಟುಂಬಕಲ್ಯಾಣ,ವೈದ್ಯಕೀಯ ಶಿಕ್ಷಣಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು, ನೌಕರರು ಬುಧವಾರ ಬೀದಿಗಿಳಿದು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ನಗರದ ಸರ್‌ಎಂವಿ ಕ್ರೀಡಾಂಗಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಿದರು.
ನಂತರ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗುತ್ತಿಗೆ ಹಾಗೂ ಹೊರಗುತ್ತಿಗೆಯಲ್ಲಿ ವೈದ್ಯರು, ನರ್ಸ್‌ಗಳು, ಸಹಾಯಕರು, ಕಂಪ್ಯೂಟರ್ ಆಪರೇಟರ್‌ಗಳು, ಡಿ ಗ್ರೂಪ್ ನೌಕರರು ಸೇರಿದಂತೆ ಜಿಲ್ಲೆಯಲ್ಲಿ3ಸಾವಿರಕ್ಕೂ ಹೆಚ್ಚು ಮಂದಿ ಆರೋಗ್ಯ ಇಲಾಖೆಯಡಿ ಏಳು ತಾಲೂಕುಗಳ ಆಸ್ಪತ್ರೆಗಳಲ್ಲಿ ಕಡಿಮೆ ವೇತನಕ್ಕೆ ದುಡಿಯುತ್ತಿದ್ದಾರೆ. ಕೊರೊನಾ ವಾರ್ಡ್‌ಗಳಲ್ಲಿ ಅನೇಕರು ಕೆಲಸ ನಿರ್ವಹಿಸುತ್ತಿದ್ದಾರೆ.
ರಜೆ ಇಲ್ಲದಂತೆ ದುಡಿಮೆ: ಕಳೆದ ಏಳು ದಿನಗಳಿಂದ ಕೆಲಸ ಮಾಡದೆ ಹೋರಾಟ ಮಾಡುತ್ತಿದ್ದರೂ, ಸರ್ಕಾರ, ಇಲಾಖೆಯಾಗಲೀ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲ. ಬೇಡಿಕೆಗೆ ಸ್ಪಂದಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.
ಕೊರೊನಾ ಸಂದರ್ಭದಲ್ಲಿ ಒಂದು ದಿನವೂ ರಜೆ ಇಲ್ಲದಂತೆ ದುಡಿಯುತ್ತಿದ್ದರೂ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಕೊರೊನಾ ವಾರಿಯರ್ಸ್ ಎಂದು ಹೇಳುವ ಸರ್ಕಾರ ಯಾವುದೇ ಸೌಲಭ್ಯ ನೀಡುತ್ತಿಲ್ಲ. ಕಳೆದ 10-15 ವರ್ಷಗಳಿಂದ ದುಡಿಯುತ್ತಿದ್ದೇವೆ. ಆದರೆ, ಕೇವಲ 8ರಿಂದ 9 ಸಾವಿರ ರೂ. ವೇತನ ನೀಡುತ್ತಿದ್ದಾರೆ. ಇದರಿಂದ ಜೀವನ ನಡೆಸಲು ಸಾಧ್ಯ ವಾಗುತ್ತಿಲ್ಲ. ಅಲ್ಲದೆ, ಕೊರೊನಾ ಸಂದರ್ಭದಲ್ಲಿ ನೌಕರರಿಗೆ ಏನಾದರೂ ತೊಂದರೆಯಾದರೆ ನಮ್ಮ ಗೋಳು ಕೇಳುವವರಿಲ್ಲ ಎಂದುಅಳಲು ತೋಡಿಕೊಂಡರು.
ಹೋರಾಟಕ್ಕೆ ನಿರ್ಧಾರ: ಕಳೆದ ಏಳು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಇದುವರೆಗೂ ನೌಕರರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಆದ್ದರಿಂದ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ನೌಕರರು ತೀರ್ಮಾನಿಸಿದರು. ಕ ರ್ನಾಟಕ ರಾಜ್ಯಆರೋಗ್ಯಮತ್ತುಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾದೇಗೌಡ, ಡಾ.ಶಾಂಭವಿ, ಡಿ ಗ್ರೂಪ್ ನೌಕರರ ಸಂಘದ ಅಧ್ಯಕ್ಷೆ ರಾಣಿ, ಉಪಾಧ್ಯಕ್ಷೆ ಚಂದ್ರಕಲಾ, ಮಹೇಶ್, ಭಾನು, ಮಹದೇವು, ಶಿವಣ್ಣ, ಕೆ.ಆರ್.ಪೇಟೆ ಕೇಶವ, ದಿವಾಕರ್, ರಾಧ ಸೇರಿದಂತೆ ನೂರಾರು ನೌಕರರು ಹಾಜರಿದ್ದರು.