Advertisement

ಕೃಷಿ ಕಾರ್ಮಿಕ ಕಾಯ್ದೆ ವಿರೋಧಿಸಿ ಪ್ರತಿಭಟನೆ

06:50 PM Jan 30, 2021 | Team Udayavani |

ಪಿರಿಯಾಪಟ್ಟಣ: ರೈತ-ಕಾರ್ಮಿಕ ವಿರೋಧಿ ಕೃಷಿ ಕಾಯಿದೆ ಹಾಗೂ ಕಾರ್ಮಿಕ ಮಸೂದೆ ಯನ್ನು ಹಿಂಪಡೆಯಬೇಕು ಎಂದು ಒತ್ತಾ ಯಿಸಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಒಕ್ಕೂಟ, ಅಂಗ® ‌ವಾಡಿ ಹಾಗೂ ಬಿಸಿಯೂಟದ ಕಾರ್ಯಕರ್ತೆಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಜಯರಾಮ್‌ ಮಾತನಾಡಿ, ಸರ್ಕಾರ ಜಾರಿಗೆ ತಂದಿರುವ ನೂತನ ಕಾಯಿದೆಗಳು ರೈತರ ಹಾಗೂ ಕಾರ್ಮಿಕರ ಮರಣ ಶಾಸನಗಳಾಗಿರುವ ಈ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನ.26 ರಿಂದ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ 105ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದರೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಬಂಡವಾಳಶಾಹಿಗಳಿಗೆ ಅನುಕೂಲ ಮಾಡಲು ಈ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ. ಕೂಡಲೇ ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸಂಘಟಿತ ಕಾರ್ಮಿಕರು ಪ್ರತಿ ಕಾರ್ಖಾನೆಗಳ ಎದುರು ಹಾಗೂ ಬಿಸಿಯೂಟ, ಅಂಗನವಾಡಿ, ಗ್ರಾಮ ಪಂಚಾಯತ್‌, ಕಟ್ಟಡ ಮುಂತಾದ ಅಸಂಘಟಿತ ಕಾರ್ಮಿಕರು ತಮ್ಮ ಕೆಲಸದ ಸ್ಥಳಗಳಲ್ಲಿ ಹೋರಾಟ ಮುಂದುವರಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು. ರೈತ ಮುಖಂಡ ಚೌತಿ ಮಲ್ಲಣ್ಣ ಮಾತನಾಡಿ, ಸರ್ಕಾರ ಅನ್ನದಾತರ ಹೋರಾಟಕ್ಕೆ ಸ್ಪಂದಿಸಬೇಕು. ರೈತರು, ಕೂಲಿ ಕಾರ್ಮಿಕರ ಬೇಡಿಕೆ ಈಡೇರಿಕೆ ತನಕ ಹೋರಾಟ ಮುಂದುವರಿಯಲಿದೆ ಎಂದರು.

ಇದನ್ನೂ ಓದಿ:ಸಾಲು, ಸಾಲು ಸಾವು! ನೋವಿನ ಬದುಕಿನ ನಡುವೆ ಕನಸೆಂಬ ಕುದುರೆಯೇರಿ ಯಶಸ್ಸು ಕಂಡ “ಬಿರದಾರ”

ಪ್ರತಿಭಟನೆಯಲ್ಲಿ ತಾಲೂಕು ಅಂಗನವಾಡಿ ನೌಕರರ ತಾಲೂಕು ಅಧ್ಯಕ್ಷೆ ಕಾವೇರಮ್ಮ, ಸಿಐಟಿಯು ಮುಖಂಡ ವಿಜಯಕುಮಾರ್‌, ಅಂಗನವಾಡಿ ಕಾರ್ಯಕರ್ತೆಯರ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದ, ಅಂಗನವಾಡಿ ಕಾರ್ಯಕರ್ತರಾದ ಲೀಲಾವತಿ, ಪುಷ್ಪ, ರಾಣಿ, ರಾಜಮಣಿ ಇತರರಿದ್ದರು

Advertisement
Advertisement

Udayavani is now on Telegram. Click here to join our channel and stay updated with the latest news.

Next