Advertisement

ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

11:31 AM Aug 09, 2020 | Suhan S |

ಶಿಡ್ಲಘಟ್ಟ: ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ, ಕೃಷಿ ಕೂಲಿಕಾರ್ಮಿಕ ವಿರೋಧಿ ಧೋರಣೆ ಖಂಡಿಸಿ ಆ.10ರಂದು ಅಖೀಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ ಹಾಗೂ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಎನ್‌. ಮುನಿಕೃಷ್ಣಪ್ಪ ತಿಳಿಸಿದರು.

Advertisement

ನಗರದ ವಾಪಸಂದ್ರದಲ್ಲಿರುವ ಸಿಐಟಿಯು ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರು ಮತ್ತು ಕೂಲಿ ಕಾರ್ಮಿಕರಿಗೆ ಮಾರಕವಾಗಿರುವ ಭೂಸುಧಾರಣೆ ತಿದ್ದುಪಡಿ ಕಾಯ್ದೆಯ ಸುಗ್ರೀವಾಜ್ಞೆ ಮೂಲಕ ಅನುಷ್ಠಾನಕ್ಕೆ ತರುತ್ತಿದೆ. ಇದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದು ಆಹಾರ ಭದ್ರತೆ ಹಾಗೂ ಸರ್ಕಾರದ ಮಧ್ಯಪ್ರವೇಶದ ಸಾಧ್ಯತೆಯನ್ನು ಕೊನೆಗಾಣಿಸುತ್ತದೆ ಹಾಗೂ ಆಹಾರ ಪೂರೈಕೆ, ದಾಸ್ತಾನು, ಕಾಳಸಂತೆ ಮಾರುಕಟ್ಟೆಗಳನ್ನು ಕಾರ್ಪೊರೇಟ್‌ ಸಂಸ್ಥೆಗಳ ನಿಯಂತ್ರಣಕ್ಕೆ ಒಳಪಡಿಸಲಿದೆ ಎಂದು ರೈತ ಮುಖಂಡರು ಕಳವಳ ವ್ಯಕ್ತಪಡಿಸಿದರು.

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಕೃಷಿ ಭೂಮಿಯನ್ನು ಕಾರ್ಪೊರೇಟ್‌ ಕಂಪನಿಗಳಿಗೆ ಒಪ್ಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಇದರಿಂದ ಕೃಷಿ ಕ್ಷೇತ್ರದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದೂ ದೂರಿದರು. ಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಜಿ.ಸಿದ್ದಗಂಗಪ್ಪ, ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್‌.ಮಂಜುಳಾ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next