ಬೆಂಗಳೂರು: ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ಇತ್ತಿಚೆಗೆ ನಡೆದ ಮಡಿವಾಳಪ್ಪ ಅಶೋಕ ರಾಯ್ ಬಾಗಳಕರ ಅವರ ಮೇಲಿನ ಹಲ್ಲೆಯನ್ನು ಖಂಡಿಸಿ ನಗರದ ಪುರಭವನದ ಮುಂದೆ ಮಂಗಳವಾರ ಕರ್ನಾಟಕ ಕ್ಷತ್ರಿಯ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಒಕ್ಕೂಟದ ರಾಜ್ಯಾಧ್ಯಕ್ಷ ಉದಯ್ ಸಿಂಗ್, ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಸಂಖ್ಯೆಯಲ್ಲಿ ಒಕ್ಕೂಟದ ಕಾರ್ಯಕರ್ತರು ಭಾಗವಹಿಸಿದ್ದರು. ಈ ವೇಳೆ ಕ್ಷುಲಕ ಕಾರಣಕ್ಕಾಗಿ ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ದುಷ್ಕರ್ಮಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ.ಆ ಹಿನ್ನೆಲೆಯಲ್ಲಿ ಹಲ್ಲೆಕೋರರು ಆರಾಮವಾಗಿದ್ದಾರೆ. ಈ ಸಂಬಂಧ ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲವಾದರೆ ಮತ್ತಷ್ಟು ಹೋರಾಟ ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಈ ವೇಳೆ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಕಮಲೇಶ್ ರಾವ್, ನಾಗೇಂದ್ರ ಬಾಬು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.