Advertisement

ಬಿಬಿಎಂಪಿ ವಿರುದ್ಧ ಬಕೆಟ್‌ ಹಿಡಿದು ಪ‹ತಿಭಟನೆ

10:55 AM Nov 20, 2019 | Suhan S |

ಬೆಂಗಳೂರು: ಬಿಬಿಎಂಪಿಯ ಅಧಿಕಾರಿಗಳು ರಾಜಕಾಲುವೆ ಒತ್ತುವರಿ ತೆರವು ಮಾಡುವಲ್ಲಿ ವಿಫ‌ಲರಾಗಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆಯ ಸದಸ್ಯರು ಟೌನ್‌ ಹಾಲ್‌ ಮುಂಭಾಗದಲ್ಲಿ ಮಂಗಳವಾರ ಬಕೆಟ್‌ ಹಿಡಿದು ವಿನೂತನವಾಗಿ ಪ್ರತಿಭಟಿಸಿದರು.

Advertisement

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರವೇ ರಕ್ಷಣಾ ವೇದಿಕೆ ಯುವಸೇನೆಯ ರಾಜ್ಯಧ್ಯಕ್ಷ ಹರೀಶ್‌, ಬಿಬಿಎಂಪಿಯ ಅಧಿಕಾರಿಗಳು ಶ್ರೀಮಂತರು ಮತ್ತು ವಿವಿಧ ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗುತ್ತಿಲ್ಲ. ಅಧಿಕಾರಿಗಳು ರಾಜಕಾಲುವೆ ಒತ್ತುವರಿ ಮಾಡಿಕೊಳ್ಳುತ್ತಿರುವವರ ಮೇಲೆ ಕ್ರಮ ತೆಗೆದುಕೊಳ್ಳದೆ ಅವರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ರಾಜಕಾಲುವೆ ಒತ್ತುವರಿ ಮಾಡಿಕೊಂಡವರ ಮೇಲೆ ಬಿಬಿಎಂಪಿಯ ಮೇಯರ್‌ ಹಾಗೂ ಆಯುಕ್ತರು ಕ್ರಮ ತೆಗೆದುಕೊಳ್ಳದೆ ಇರುವುದನ್ನು ನೋಡಿದರೆ, ಅವ್ಯವಹಾರದಲ್ಲಿ ಶಾಮೀಲಾಗಿದ್ದಾರೆಯೇ ಎನ್ನುವ ಅನುಮಾನ ಮೂಡುತ್ತಿದೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next